ಮೈಸೂರು

ತಿ.ನರಸೀಪುರ ಕುಂಭಮೇಳ : ಅಗತ್ಯ ಕ್ರಮಕ್ಕೆ ಸಚಿವ ಮಹದೇವಪ್ಪ ಸೂಚನೆ

ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ 2025ರ ಕುಂಭಮೇಳ  ನಡೆಯಲಿದೆ. ಹೀಗಾಗಿ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ತಿಳಿಸಿದರು

ಕುಂಭ ಮೇಳ -2025 ರ ಆಚರಣೆಯ ಸಂಬಂಧ ಭಾನುವಾರ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫೆಬ್ರವರಿ 10 ರಿಂದ 12 ಈವರೆಗೆ ಟಿ.ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆ.ಎಸ್.ಆರ್.ಟಿ. ಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಆರತಿಯನ್ನು ಫೆಬ್ರವರಿ 11 ರಂದು ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಚತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಚತೆ ಕಾಪಾಡಬೇಕು ಎಂದು ಸೂಚನೆ ನೀಡಿದರು.

ಫೈರ್ ಸೆಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನದಿಯಲ್ಲಿ ಸ್ಥಾನ ಮಾಡಲು 5 ಕಡೆ ಜಾಗ ಗುರುತಿಸಲಾಗಿದೆ. 1 ಯಾಗ ಶಾಲೆ ನಿರ್ಮಾಣ ಮಾಡಲಾಗುವುದು. 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

8 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

8 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

9 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

10 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

10 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

10 hours ago