ಟಿ.ನರಸೀಪುರ: ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.
ರಾಜೇಶ್ ಎಂಬುವರ ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಸಿ ಕ್ಯಾಮರಾದಲ್ಲಿ ಚಿರತೆ ಓಡಾಟ ದೃಶ್ಯ ಸೆರೆಯಾಗಿದೆ.
ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದು, ಆದಷ್ಟು ಬೇಗನೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.





