Mysore
29
overcast clouds

Social Media

ಸೋಮವಾರ, 22 ಜೂನ್ 2026
Light
Dark

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.

ಶಿವಣ್ಣ (50), ನಾಗರತ್ನ (45) ಹಾಗೂ ರಕ್ಷಿತಾ (21) ಎಂಬುವವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ.

ಅದೇ ಗ್ರಾಮದ ಉಲ್ಲಾಸ್ ಗೌಡ ಎಂಬಾತ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು, ಮಾನಸಿಕ ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಕ್ಷಿತಾಗೆ ಮದುವೆ ನಿಶ್ಚಿಯವಾಗಿತ್ತು. ಉಲ್ಲಾಸ್ ಗೌಡನಿಗೆ ರಕ್ಷಿತಾ ಕಳುಹಿಸಿದ ಮೆಸೇಜ್ ಹಾಗೂ ಕೆಲವು ಫೋಟೋಗಳನ್ನು ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಮದುವೆ ನಿಶ್ಚಿಯವಾಗಿದ್ದ ಯುವಕನಿಗೂ ಉಲ್ಲಾಸ್ ಗೌಡ ಮೆಸೇಜ್ ಹಾಗೂ ಫೋಟೋಗಳನ್ನು ಕಳುಹಿಸಿದ್ದ ಎನ್ನಲಾಗಿದೆ. ಈ ಬೆಳವಣಿಗೆಯಿಂದ ಬೇಸತ್ತು ಗ್ರಾಮದ ತಮ್ಮ ಮನೆಯಲ್ಲೇ ವಿಷ ಸೇವಿಸಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂವರ ಸಾವಿಗೂ ಉಲ್ಲಾಸ್ ಗೌಡ‌ನೇ ಕಾರಣನೆಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!