Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

ತಿ.ನರಸೀಪುರ: ಪುರಸಭೆಯ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತುಂಬಲ ಪ್ರಕಾಶ್ ಆಯ್ಕೆ

ಮೈಸೂರು: ಪಟ್ಟಣ ಪುರಸಭೆಯ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ 7ನೇ ವಾರ್ಡಿನ ಸದಸ್ಯ ತುಂಬಲ ಪ್ರಕಾಶ್ ರನ್ನು ಆಯ್ಕೆ ಮಾಡಲಾಗಿದೆ.

ಪಟ್ಟಣ ಪುರಸಭೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ವೇಳೆ ಪ್ರಕಾಶ್ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮೊದಲಿಗೆ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಿ ನಂತರ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಿತು.

ಸ್ಥಾಯಿ ಸಮಿತಿ ಸದಸ್ಯರನ್ನಾಗಿ ಮಾಜಿ ಅಧ್ಯಕ್ಷ ಎಸ್.ಮದನ ರಾಜ್, ಟಿ.ಎಂ.ನಂಜುಂಡಸ್ವಾಮಿ, ಎನ್.ಸೋಮು, ಶೋಭಾರಾಣಿ, ಪ್ರೇಮ ಹಾಗು ರೂಪಶ್ರಿ ಯವರನ್ನು ಆಯ್ಕೆ ಮಾಡಿ ನಂತರ ಅಧ್ಯಕ್ಷರ ಆಯ್ಕೆಗೆ ಅವಕಾಶ ಮಾಡಿಕೊಡಲಾಯಿತು.

ಪ್ರಕಾಶ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಹಲವಾರು ಮುಖಂಡರು ಪುರಸಭೆಗೆ ಆಗಮಿಸಿ ಅಧ್ಯಕ್ಷರನ್ನು‌ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ತುಂಬಲ ಪ್ರಕಾಶ್ ಪುರಸಭೆಯಲ್ಲಿ ಖಾಲಿ ಉಳಿದಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮಹದೇವಪ್ಪರನ್ನು ಕೇಳಿಕೊಂಡ ಹಿನ್ನೆಲೆಯಲ್ಲಿ ಇಂದು ಸ್ಥಾಯಿ ಸಮಿತಿಗೆ ಅಧ್ಯಕ್ಷ ಮತ್ತು ಸದಸ್ಯರ ಆಯ್ಕೆಗೆ ಅವಕಾಶ ಮಾಡಲಾಗಿದೆ.

ನನಗೆ ದೊರಕಿರುವ ಅಧ್ಯಕ್ಷ ಸ್ಥಾನದ ಅವಧಿಯಲ್ಲಿ ಸ್ಥಾಯಿ ಸಮಿತಿ ವ್ಯಾಪ್ತಿಗೆ ಬರುವ ಉಳಿಕೆ ಕೆಲಸಗಳಿಗೆ ಆದ್ಯತೆ ಮೇರೆಗೆ ಕೆಲಸ ಮಾಡಿ ಅಧ್ಯಕ್ಷ ಸ್ಥಾನಕ್ಕೆ ಗೌರವ ತಂದು ಕೊಡುವ ಕೆಲಸ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಪುರಸಭೆ ಅಧ್ಯಕ್ಷೆ ವಸಂತ ಬಿ.ಶ್ರೀಕಂಠ, ಉಪಾಧ್ಯಕ್ಷೆ ರಾಜೇಶ್ವರಿ ಎಂ. ರಾಘವೇಂದ್ರ, ಮಾಜಿ ಅಧ್ಯಕ್ಷರಾದ ಟಿ.ಎಂ.ನಂಜುಂಡಸ್ವಾಮಿ, ಎಸ್.ಮದನ್ ರಾಜ್, ಎನ್.ಸೋಮು, ತಾ.ಪಂ.ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಸದಸ್ಯರಾದ ಅರ್ಜುನ್ ರಮೇಶ್, ಸೇರಿದಂತೆ ಮತ್ತಿತರರಿದ್ದರು.

Tags:
error: Content is protected !!