ಮೈಸೂರು: ಪಟ್ಟಣ ಪುರಸಭೆಯ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ 7ನೇ ವಾರ್ಡಿನ ಸದಸ್ಯ ತುಂಬಲ ಪ್ರಕಾಶ್ ರನ್ನು ಆಯ್ಕೆ ಮಾಡಲಾಗಿದೆ.
ಪಟ್ಟಣ ಪುರಸಭೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ವೇಳೆ ಪ್ರಕಾಶ್ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮೊದಲಿಗೆ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಿ ನಂತರ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಿತು.
ಸ್ಥಾಯಿ ಸಮಿತಿ ಸದಸ್ಯರನ್ನಾಗಿ ಮಾಜಿ ಅಧ್ಯಕ್ಷ ಎಸ್.ಮದನ ರಾಜ್, ಟಿ.ಎಂ.ನಂಜುಂಡಸ್ವಾಮಿ, ಎನ್.ಸೋಮು, ಶೋಭಾರಾಣಿ, ಪ್ರೇಮ ಹಾಗು ರೂಪಶ್ರಿ ಯವರನ್ನು ಆಯ್ಕೆ ಮಾಡಿ ನಂತರ ಅಧ್ಯಕ್ಷರ ಆಯ್ಕೆಗೆ ಅವಕಾಶ ಮಾಡಿಕೊಡಲಾಯಿತು.
ಪ್ರಕಾಶ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಹಲವಾರು ಮುಖಂಡರು ಪುರಸಭೆಗೆ ಆಗಮಿಸಿ ಅಧ್ಯಕ್ಷರನ್ನು ಅಭಿನಂದಿಸಿದರು.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ತುಂಬಲ ಪ್ರಕಾಶ್ ಪುರಸಭೆಯಲ್ಲಿ ಖಾಲಿ ಉಳಿದಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮಹದೇವಪ್ಪರನ್ನು ಕೇಳಿಕೊಂಡ ಹಿನ್ನೆಲೆಯಲ್ಲಿ ಇಂದು ಸ್ಥಾಯಿ ಸಮಿತಿಗೆ ಅಧ್ಯಕ್ಷ ಮತ್ತು ಸದಸ್ಯರ ಆಯ್ಕೆಗೆ ಅವಕಾಶ ಮಾಡಲಾಗಿದೆ.
ನನಗೆ ದೊರಕಿರುವ ಅಧ್ಯಕ್ಷ ಸ್ಥಾನದ ಅವಧಿಯಲ್ಲಿ ಸ್ಥಾಯಿ ಸಮಿತಿ ವ್ಯಾಪ್ತಿಗೆ ಬರುವ ಉಳಿಕೆ ಕೆಲಸಗಳಿಗೆ ಆದ್ಯತೆ ಮೇರೆಗೆ ಕೆಲಸ ಮಾಡಿ ಅಧ್ಯಕ್ಷ ಸ್ಥಾನಕ್ಕೆ ಗೌರವ ತಂದು ಕೊಡುವ ಕೆಲಸ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.
ಪುರಸಭೆ ಅಧ್ಯಕ್ಷೆ ವಸಂತ ಬಿ.ಶ್ರೀಕಂಠ, ಉಪಾಧ್ಯಕ್ಷೆ ರಾಜೇಶ್ವರಿ ಎಂ. ರಾಘವೇಂದ್ರ, ಮಾಜಿ ಅಧ್ಯಕ್ಷರಾದ ಟಿ.ಎಂ.ನಂಜುಂಡಸ್ವಾಮಿ, ಎಸ್.ಮದನ್ ರಾಜ್, ಎನ್.ಸೋಮು, ತಾ.ಪಂ.ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಸದಸ್ಯರಾದ ಅರ್ಜುನ್ ರಮೇಶ್, ಸೇರಿದಂತೆ ಮತ್ತಿತರರಿದ್ದರು.
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…