ಮೈಸೂರು

ತಗಡೂರು | 21ಕೋಟಿ ರೂ. ಅನುದಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ನಂಜನಗೂಡು:  ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿಗೆ ೨೧ ಕೋಟಿ ರೂಗಳ ಅನುದಾನ ಅಭಿವೃದ್ಧಿ ಕಾಮಗಾರಿಗಳಿಗೆ ಡಾ.ಯತೀಂದ್ರ ಸಿದ್ಧರಾಮಯ್ಯ, ಸಂಸದ ಸುನಿಲ್ ಬೋಸ್ ಚಾಲನೆ ನೀಡಿದರು.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಸೇರುವ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಾಮಗಳ ಅಭಿವೃದ್ಧಿಗೆ ಸರ್ಕಾರದಿಂದ ಸುಮಾರು ೨೧ ಕೋಟಿ ರೂಗಳ ಅನುದಾನ ಬಿಡುಗಡೆಯಾಗಿದ್ದು ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಸಂಸದ ಸುನಿಲ್ ಬೋಶ್ ರವರು ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಬಿಳಿಗೆರೆ ಗ್ರಾಮದಲ್ಲಿ ಚಾಲನೆ ನೀಡಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ ರಾಜ್ಯದಲ್ಲಿ ಹಣಕಾಸು ಪರಿಸ್ಥಿತಿ ಚೆನ್ನಾಗಿದೆ ಅದೇ ರೀತಿ ಅಭಿವೃದ್ಧಿ ಕಾಮಗಾರಿಗಳು ಸಹ ರಾಜ್ಯದಲ್ಲಿ ನಡೆಯುತ್ತಿದ್ದು ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುದಾನ ನೀಡಿದ್ದಾರೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು ವಿರೋಧ ಪಕ್ಷದವರಿಗೆ ಕಾಂಗ್ರೆಸ್ ಸರ್ಕಾರದ ಬಡವರ ಪರ ಜನ ಪರವಾದ ಯೋಜನೆಗಳಿಗೆ ಅನುದಾನ ನೀಡುತ್ತಿರುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಆದ್ದರಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ ಎಂದು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಇವರ ಹೇಳಿಕೆಗಳನ್ನು ಸಹ ಕೆಲವು ಮಾಧ್ಯಮದವರು ಅವರ ಹೇಳಿಕೆಗಳನ್ನು ಹೆಚ್ಚು ಹೆಚ್ಚಾಗಿ ಪ್ರಚಾರ ಮಾಡಿ ಬಿಂಬಿಸುವಂತಹ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಧ್ಯಮಗಳ ಅವಧಿಗಳಿಗೆ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹಣಕಾಸು ವ್ಯವಸ್ಥೆ ಸುಸ್ಥಿರವಾಗಿದೆ ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಒದಗಿಸುವ ಮೂಲಕ ಅಭಿವೃದ್ಧಿ ಕಾಮಗಾರಿಗಳು ಸಹ ಕೈಗೆತ್ತಿಕೊಳ್ಳಲಾಗಿದೆ ಎಂದು ವಿರೋಧ ಪಕ್ಷಗಳ ಆರೋಪಗಳಿಗೆ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯ ಆಕ್ರೋಶ್ ವ್ಯಕ್ತಪಡಿಸಿದ್ದರು.

ಸಂಸದ ಸುನಿಲ್ ಬೋಶ್ ಅವರು ಮಾತನಾಡಿ ನಮ್ಮ ತಂದೆ  ಎಚ್ ಸಿ ಮಹದೇವಪ್ಪ ಹಾಗೂ ನಾನು ರಾಜಕೀಯವಾಗಿ ಈ ಮಟ್ಟಕ್ಕೆ ಬೆಳೆಯಲು ನಮ್ಮ ಕ್ಷೇತ್ರದ ಜನತೆಯ ಕಾರಣ ಅದಕ್ಕೆ ಕ್ಷೇತ್ರದ ಜನತೆಗೆ ನಾವು ಆಭಾರಿಯಾಗಿದ್ದೇವೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಜನರ ಸೇವೆಯನ್ನು ಮಾಡುವ ಮೂಲಕ ಅವರ ಋಣವನ್ನು ನಮ್ಮ ಕೈಲದ ಮಟ್ಟಿಗೆ ತೀರಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಹೆಚ್ಚು ಸಮವಹಿಸಿದ ವರುಣ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯನವರ ಶ್ರಮ ಕೂಡ ಬಹಳ ಸಹಕಾರಿಯಾಗಿದ್ದು ಅವರ ಈ ಶ್ರಮಕ್ಕೆ ನಾವು ಋಣಿಯಾಗಿದ್ದೇವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ದಯಾನಂದ ಮೂರ್ತಿ, ಗ್ರಾಮ ಪಂಚಾಯತಿ ಅಧ್ಯಕ್ಷ ನಂಜುಂಡಸ್ವಾಮಿ ಜಿ, ಮರಳಿ ರಂಗಸ್ವಾಮಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ನಂಜುಂಡೇಗೌಡ, ಪದ್ಮನಾಭ, ಎಂ ಟಿ ರವಿಕುಮಾರ್, ಕಾಂಗ್ರೆಸ್ ಪಕ್ಷದ ಕಾನೂನು ವಿಭಾಗದ ಎಂ ಸಿ ಹುಂಡಿ ಶಿವಪ್ರಸಾದ್ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮ ಪಂಚಾಯತ್ ಸದಸ್ಯರು ಮುಖಂಡರು ಇಲಾಖೆ ಅಧಿಕಾರಿಗಳು ಗ್ರಾಮಸ್ಥರು ಹಾಜರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago