ಮೈಸೂರು

ಶೇ100ರಷ್ಟು ಅನುದಾನ ಬಳಕೆಗೆ ಕ್ರಮವಹಿಸಿ ; ಕೇಂದ್ರ ಸಚಿವ ಕುಮಾರಸ್ವಾಮಿ

ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ  ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅವರಿಗೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿದ್ದ ಭೂಮಿಯನ್ನು ವಶಕ್ಕೆ ಪಡೆದು ಕೆ ಐ ಡಿ ಬಿ ಅವರು ಒದಗಿಸಬೇಕು. ನಾಗನಹಳ್ಳಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಭೂಮಿ ಪಡೆಯುವ ಕಾರ್ಯವನ್ನು ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲ ಜೀವನ್ ಮಿಷನ್ ಯೋಜನೆಯು ಪ್ರತಿ ಮನೆಗೂ ನಲ್ಲಿಯ ಮೂಲಕ ನೀರನ್ನು ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಎಲ್ಲಾ ಹಳ್ಳಿಗಳಿಗೂ ನೀರು ಒದಗಿಸಿ. ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷೆ ಮಾಡಬೇಕು. ಅಮೃತ್ ಯೋಜನೆಯಡಿ ನಗರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಅನುಧಾನ ಬಿಡುಗಡೆ ಆಗಿದ್ದು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ನೀರಿನ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಉತ್ಪಾದನೆ, ವ್ಯಾಪಾರ ಸೇವೆ ಹಾಗೂ ಕೃಷಿಗೆ 10 ಲಕ್ಷದವರೆಗೆ ಸಾಲ ನೀಡಲಾಗುತ್ತಿದೆ. ಇದರಲ್ಲಿ ಜಿಲ್ಲೆಗೆ ಈ ವರ್ಷ 2902 ಕೋಟಿ ಸಾಲ ನೀಡಲಾಗಿರುವ ಕುರಿತು ಲೀಡ್ ಬ್ಯಾಂಕ್ ಮ್ಯಾನೇಜರ್ ಇಂದ ಮಾಹಿತಿ ಪಡೆದ ಅವರು ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದರು.

ರೈತರು ದೇಶದ ಬೆನ್ನೆಲುಬು. ಅತಿಯಾದ ಮಳೆಯಿಂದ ಆದ ಬೆಳೆ ಹಾನಿಗೆ ಪರಿಹಾರವನ್ನು ಅರ್ಹರಿಗೆ ವಿತರಣೆ ಮಾಡಬೇಕು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಲು ರೈತರಿಗೆ ಉತ್ತೇಜನ ನೀಡಬೇಕು. ಇದರಿಂದ ಬೆಳೆ ನಷ್ಟ ಉಂಟಾದರೆ ಬೆಳೆ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ. ಹತ್ತಿ ಬೆಳೆಗೆ ಉತ್ತಮ ತಳಿಯ ಬಿತ್ತನೆ ಬೀಜ ಬಂದಿದ್ದು, ರಾಯಚೂರು ಭಾಗದಲ್ಲಿ ಬಿತ್ತನೆ ಆಗುತ್ತಿದೆ. ಇದರಿಂದ ಶೇಕಡಾ 50% ಉತ್ಪಾದನೆ ಹೆಚ್ಚಾಗುತ್ತದೆ. ಈ ಬಗ್ಗೆ ಅಧ್ಯಯನ ಮಾಡಿ ಹೆಚ್ ಡಿ ಕೋಟೆ ಭಾಗದ ಜನರಿಗೆ ಮಾಹಿತಿ ನೀಡುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಜಾನುವಾರುಗಳಿಗೆ ನಿಗದಿತ ಅವಧಿಯಲ್ಲಿ ಕಾಲುಬಾಯಿ, ಚಪ್ಪೆ ರೋಗದ ಲಸಿಕೆ ನೀಡಬೇಕು. ಮೇವು ಕಿಟ್ ಗಳ ವಿತರಣೆ ಮಾಡುವ ಮೂಲಕ ಜಾನುವಾರು ಮೇವು. ಕೊರತೆ ಆಗದಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕ ರಾಜ್ಯದಲ್ಲಿ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದೆ ಎಂದು ಸರ್ವೆಗಳು ಹೇಳುತ್ತಿವೆ. ಆದರೆ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಪ್ರತಿ ವರ್ಷ 1 ಕೋಟಿಯಷ್ಟು ಗಿಡಗಳನ್ನು ನೀಡುತ್ತಾ ಇದ್ದಾರೆ ಆದರೆ ಇವುಗಳ ಪೋಷಣೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಮುಖವಾಗಿ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಅಂತಹ ಯುವಕರಿಗೆ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಮೂಲಕ ಸೌಲಭ್ಯ ಗಳನ್ನು ಕಲ್ಪಿಸಿ ಸ್ವಯಂ ಉದ್ಯೋಗ ಮಾಡಲು ಅಧಿಕಾರಿಗಳು ಅವಕಾಶ ಕಲ್ಪಿಸಬೇಕು ಎಂದರು.

ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ ಡಿ ಹರೀಶ್ ಗೌಡ  ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡಿದ್ದರರೂ ಸಹ ಬ್ಯಾಂಕ್ ಗಳು ಸಾಲ ನೀಡುತ್ತಿಲ್ಲ. ಲೀಡ್ ಬ್ಯಾಂಕ್ ಮ್ಯಾನೇಜರ್ ಈ ನಿಟ್ಟಿನಲ್ಲಿ ಪರಿಶೀಲಿಸಿ ಸಾಲ ನೀಡುವಂತೆ ಕ್ರಮವಹಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಏರ್ಪೋರ್ಟ್ ಅಥಾರಿಟಿ ಅವರು 500 ಕೋಟಿಗಳ ವೆಚ್ಚದಲ್ಲಿ ಏರ್ಪೋರ್ಟ್ ಬೈಪಾಸ್ ರಸ್ತೆ ನಿರ್ಮಿಸಲು ನ್ಯಾಷನಲ್ ಹೈವೇ ಅಥಾರಿಟಿ ಅವರಿಗೆ ನೀಡಲು ಇದ್ದಾರೆ. ಆದರೆ ಇದರ ವೆಚ್ಚ 800 ಕೋಟಿ ಆಗುವುದಾಗಿ ವರದಿ ನೀಡಿರುತ್ತಾರೆ. ಏರ್ ಪೋರ್ಟ್ ಆಫ್ ಅಥಾರಿಟಿ ಇಂಡಿಯಾ ಅವರಿಗೆ ಅಗತ್ಯವಿದ್ದ ಭೂಮಿಯಲ್ಲಿ ಈಗಾಗಲೇ 150 ಎಕರೆ ಕೆ ಐ ಡಿ ಬಿ ವಶಕ್ಕೆ ಪಡೆದಿದ್ದು ಉಳಿದ 40 ಎಕರೆ ಪಡೆಯಲು ಪ್ರಗತಿ ಹಂತದಲ್ಲಿ ಇದೆ ಎಂದರು.

ಸಭೆಯಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago