Mysore
25
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಜಾತ್ರಗೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ದರ್ಶನ್ ಧ್ರುವನಾರಾಯಣ್

ಮೈಸೂರು: ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ಮತ್ತು ಅಗತ್ಯ ತೀರ್ಮಾನಗಳನ್ನು ಕೈಗೊಳ್ಳುವಂತೆ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ತಿಳಿಸಿದರು.

ಏಪ್ರಿಲ್ 9 ರಂದು ನಡೆಯುವ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವ ಹಿನ್ನೆಲೆ, ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಸಭಾಂಗಣದಲ್ಲಿ ಗುರುವಾರ 2 ನೇ ಹಂತದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ತಹಸೀಲ್ದಾರ್ ಶಿವಕುಮಾರ್ ಕಾಸನೂರ್, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ನಗರಸಭೆ ಪೌರಯುಕ್ತ ವಿಜಯ್, ಎ.ಎಸ್.ಪಿ ಮಲ್ಲೇಶ್, ಇ.ಓ.ಜಗದೀಶ್, ಡಿವೈಎಸ್‌ಪಿ ರಘು, ಸೇರಿದಂತೆ ವಿವಿಧ ಗ್ರಾಮದ ಯಜಮಾನರುಗಳು, ಮುಖಂಡರುಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: