ಮೈಸೂರು

ಸೆಪ್ಟಂಬರ್‌ ಅಂತ್ಯಕ್ಕೆ ಆರೋಗ್ಯ ಇಲಾಖೆಯು ಶೇ.100 ರಷ್ಟು ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳಿ-ಕೆ.ಎಂ.ಗಾಯತ್ರಿ

ಮೈಸೂರು: ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲೆಯ ಪ್ರಗತಿ ಉತ್ತಮವಾಗಿದ್ದು, ಸೆಪ್ಟೆಂಬರ್ ಅಂತ್ಯಕ್ಕೆ ಎಲ್ಲಾ ಕಾರ್ಯಗಳಲ್ಲಿ ಕಡ್ಡಾಯವಾಗಿ ಶೇ.100 ರಷ್ಟು ಪ್ರಗತಿ ಸಾಧಿಸುವ ಬಗ್ಗೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ ಸಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ 2024-25ನೇ ಸಾಲಿನ ಆರ್ಥಿಕ ವರ್ಷದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024-25ನೇ ಸಾಲಿನ ಜುಲೈ ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಪರಿಶೀಲನೆ ಮಾಡಿದರು.

ಜಿಲ್ಲಾ ಆರೋಗ್ಯ ಸೊಸೈಟಿಯ ಅನುಷ್ಠಾನಕ್ಕೆ ಸಂಬoಧಿಸಿದoತೆ ಆಡಳಿತಾತ್ಮಕ ವಿಷಯಗಳಿಗೆ ಅನುಮೋದನೆ ನೀಡಿ, ಸಮುದಾಯ ಮಟ್ಟದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಹಾಗೂ ತಾಯಿ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಹೈರಿಸ್ಕ್ ಮತ್ತು ಸಾಮಾನ್ಯ ಗರ್ಭಿಣಿ ಮಹಿಳೆಯರು ಮತ್ತು ಬಾಣಂತಿಯರ ಭೇಟಿ, ಪಿ.ಎಂ.ಎಸ್.ಎo.ಎ ಕಾರ್ಯಕ್ರಮ, ಮಕ್ಕಳ ಆರೋಗ್ಯ ಕಾರ್ಯಕ್ರದಡಿಯಲ್ಲಿ ಸಮುದಾಯ ಮಟ್ಟದಲ್ಲಿ ನವಜಾತ ಶಿಶುಗಳ ಆರೈಕೆ, ಸಮುದಾಯ ಮಟ್ಟದಲ್ಲಿ ಮಕ್ಕಳ ಆರೈಕೆ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿಯಲ್ಲಿ ಲಸಿಕೆಯಿಂದ ವಂಚಿತವಾಗದಂತೆ ಶೇ.100 ರಷ್ಟು ಲಸಿಕಾಕರಣ ಮಾಡಬೇಕು ಎಂದು ಹೇಳಿದರು.

ಬಾಲ್ಯ ವಿವಾಹ ಕಾಯ್ದೆ, ಭ್ರೂಣಹತ್ಯೆ ಹಾಗೂ ಪೋಕ್ಸೋ ಕಾಯ್ದೆ, ಕುಟುಂಬ ಕಲ್ಯಾಣ ನಿಯಂತ್ರಣ ಕಾರ್ಯಕ್ರಮದಲ್ಲಿ ಸಂತಾನಹರಣ ಚಿಕಿತ್ಸೆ, ಸಮುದಾಯ ಮಟ್ಟದಲ್ಲಿ ಶೀಘ್ರಗತಿಯಲ್ಲಿ ಕ್ಷಯರೋಗ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು. ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಹಿರಿಯ ನಾಗರೀಕರಿಗೆ ಉಚಿತ ಕನ್ನಡಕ ವಿತರಣೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಹಾಗೂ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಫ್ಲೊರೋಸಿಸ್ ಕಾರ್ಯಕ್ರದಡಿಯಲ್ಲಿ ಗ್ರಾಮ ಪಂಚಾಯಿತಿ ಸಮನ್ವಯತೆಯೊಂದಿಗೆ ಪ್ಲೋರೋಸಿಸ್ ಪ್ರಮಾಣದ ಬಗ್ಗೆ ಪರೀಕ್ಷೆ ನಡೆಸುವ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಮಗಳಲ್ಲಿ ನೀರಿ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ಮಾಡಲು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಾರ್ಯ ನಿರತವಾಗಿರುವ District early intervention centre ಕಾರ್ಯಕ್ರಮಗಳ ಸಮನ್ವಯ ಹಾಗೂ ಶಾಲೆಗಳಲ್ಲಿ ಕ್ರಮಬದ್ಧವಾಗಿ ಆರೋಗ್ಯ ತಪಾಸಣೆ ನಡೆಸಿ, ಅಂಧತ್ವ ಮಕ್ಕಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಆರೋಗ್ಯ ಕಾರ್ಯಕ್ರಮಗಳಿಗೆ ಮೀಸಲಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಇತರ ಇಲಾಖೆಗಳ ಸಮನ್ವಯತೆಯಿಂದ ಹಾಗೂ ಎಲ್ಲಾ ಕಂದಾಯ ಗ್ರಾಮಗಳಲ್ಲಿ ರಚನೆಯಾಗಿರುವ ವಿ.ಹೆಚ್.ಎಸ್.ಎನ್.ಸಿ. ಸಮಿತಿಗಳ ಮೂಲಕ ಹೆಚ್ಚಿನ ರೀತಿಯಲ್ಲಿ ಪ್ರಚಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಆರ್.ಬಿ.ಎಸ್.ಕೆ ಕಾರ್ಯಕ್ರಮದ ಸ್ವಾಸ್ಥ್ಯಕಿರಣ ತಂತ್ರಾoಶದಲ್ಲಿ ಸುಮಾರು 1,21,412 ಮಕ್ಕಳು ನೋಂದಣಿಯಾಗಿದ್ದು, ಈ ಪೈಕಿ 1,99,628 ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ. 31,624 ಮಕ್ಕಳನ್ನು ವಿವಿಧ ಹಂತ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸ್ಸು ಮಾಡಲಾಗಿದ್ದು, 710 ಮಕ್ಕಳಿಗೆ ಪ್ರಸ್ತುತ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 27 ಮಕ್ಕಳಿಗೆ ಶಸ್ತçಚಿಕಿತ್ಸಯನ್ನು ಮಾಡಲಾಗಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಇದೇ ಸಂದರ್ಭದಲ್ಲಿ ಆರ್.ಬಿ.ಎಸ್.ಕೆ ಕಾರ್ಯಕ್ರಮದ ವೈದ್ಯರ ತಂಡಕ್ಕೆ ಸ್ವಾಸ್ಥ್ಯಕಿರಣ ತಂತ್ರಾಂಶದ ನಿರ್ವಹಣೆಗಾಗಿ ಲ್ಯಾಪ್ ಟಾಪ್ ಗಳನ್ನು ವಿತರಣೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಪಿ.ಸಿ.ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

10 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

10 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

10 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago