ಮೈಸೂರು

ತಲಕಾಡು | ಅಂಬೇಡ್ಕರ್ ನಾಮಫಲಕ ವಿಚಾರವಾಗಿ ಗಲಾಟೆ ; ಸ್ಥಳದಲ್ಲಿ ಬಿಗುವಿನ ವಾತಾವರಣ

ಟಿ.ನರಸೀಪುರ : ಇಲ್ಲಿನ ತಲಕಾಡು ಗ್ರಾಮದಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗಗಳ ನಡುವೆ ಬೋರ್ಡ್ ನೆಡುವ ವಿಚಾರಕ್ಕೆ ಘರ್ಷಣೆಯಾಗಿದೆ. ನಾಯಕ
ಜನಾಂಗಕ್ಕೆ ಸೇರಿದ ಜಾಗದಲ್ಲಿ ಅಂಬೇಡ್ಕರ್ ಭಾವಚಿತ್ರದ ಬೋರ್ಡ್ ಅಳವಡಿಕೆ ಮಾಡಲಾಗಿದೆ ಎಂದು ಆರೋಪಿಸಿ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆಗೆ ಸ್ಥಳಕ್ಕೆ ಬಂದ ಪೊಲೀಸರು ಎರಡು ಗುಂಪಿನ ನಡುವೆ ಮಾತುಕತೆ ನಡೆಸಿದ್ದಾರೆ. ಪೊಲೀಸರ ಮಾತಿಗೂ ಕಿವಿಗೊಡದ ನಾಯಕ ಸಮುದಾಯದ ಯುವಕರು, ಅಂಬೇಡ್ಕರ್ ಭಾವಚಿತ್ರದ ಬೋರ್ಡ್ ನ ಪಕ್ಕದಲ್ಲಿ ಮದಕರಿ ಭಾವಚಿತ್ರವಿರುವ ಬೋರ್ಡ್‌  ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪರಿಸ್ಥಿತಿಯನ್ನು ತಹಬದಿಗೆ ತರಲು ಶ್ರಮಿಸುತ್ತಿದ್ದಾರೆ.

AddThis Website Tools
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆನೆಧಾಮ ಕಾಮಗಾರಿ ಶೀಘ್ರ : ಸಚಿವ ಈಶ್ವರ ಖಂಡ್ರೆಆನೆಧಾಮ ಕಾಮಗಾರಿ ಶೀಘ್ರ : ಸಚಿವ ಈಶ್ವರ ಖಂಡ್ರೆ

ಆನೆಧಾಮ ಕಾಮಗಾರಿ ಶೀಘ್ರ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಹಾಸನ ಕೊಡಗು ಮತ್ತು ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳಿಂದ ಸಂಭವಿಸುತ್ತಿರುವ ಜೀವಹಾನಿ, ಬೆಳೆ ಹಾನಿ ತಡೆಯಲು ಭದ್ರಾ ಅಭಯಾರಣ್ಯದಲ್ಲಿ…

5 hours ago
ತಾಲೂಕಿನ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಬದ್ಧ : ಶಾಸಕ ಉದಯ್‌ತಾಲೂಕಿನ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಬದ್ಧ : ಶಾಸಕ ಉದಯ್‌

ತಾಲೂಕಿನ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಬದ್ಧ : ಶಾಸಕ ಉದಯ್‌

ಕೆ.ಎಂ.ದೊಡ್ಡಿ : ತಾಲೂಕಿನ ಕೆರೆಗಳ ಸಮಗ್ರ ಅಭಿವೃದ್ಧಿ ಮಾಡಿ, ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ…

5 hours ago
ಮಂಡ್ಯ | ಜಲ್-ಜೀವನ್‌ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ಆರೋಪಮಂಡ್ಯ | ಜಲ್-ಜೀವನ್‌ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ

ಮಂಡ್ಯ | ಜಲ್-ಜೀವನ್‌ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ

ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ…

5 hours ago

ಹನೂರು | ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದ ಸಿಎಂ

ಹನೂರು: ಪಟ್ಟಣದಲ್ಲಿ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ…

6 hours ago

ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಈಗ ನೀಟ್ ಕಡ್ಡಾಯ: ಡಾ. ಶರಣ ಪ್ರಕಾಶ ಪಾಟೀಲ

ಬೆಂಗಳೂರು : ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಪ್ರವೇಶವು ಈಗ ನೀಟ್ ವ್ಯಾಪ್ತಿಗೆ ಬರಲಿದೆ. ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ…

7 hours ago

ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಪಿರಿಯಾಪಟ್ಟಣ: ಕಳೆದ ಮೂರು ವರ್ಷಗಳಿಂದ ತಾಲೂಕು ಆಡಳಿತದ ಮುಂಭಾಗ ತಾಲ್ಲೂಕಿನ ಭೂ ಸಮಸ್ಯೆ ಸೇರಿದಂತೆ ಇತರೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ…

8 hours ago