Mysore
17
broken clouds

Social Media

ಶುಕ್ರವಾರ, 09 ಜನವರಿ 2026
Light
Dark

ಶಿಕ್ಷಕರ ವರ್ಗಾವಣೆ,ತರಗತಿ ಬಹಿಷ್ಕರಿಸಿ ಮಕ್ಕಳ ಪ್ರತಿಭಟನೆ

Teacher Transfers Spark Student Protest; Classes Boycotted

ಮೈಸೂರು: ಆಂಗ್ಲ ಭಾಷೆ ಶಿಕ್ಷಕರ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಕೋಣನೂರು ಗ್ರಾಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಪೋಷಕರು ದಿಢೀರ್ ಪ್ರತಿಭಟನೆ ನಡೆಸಿದರು.

ಸಿ.ಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕೋಣನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಜಮಾಯಿಸಿದ ಪೋಷಕರು ಶಾಲಾ ಮಕ್ಕಳನ್ನು ತರಗತಿಗಳಿಗೆ ಕಳುಹಿಸದೆ ತರಗತಿಗಳನ್ನು ಬಹಿಷ್ಕರಿಸಿ, ಶಾಲೆಯ ಗೇಟ್ ಬಾಗಿಲನ್ನು ಬಂದ್ ಮಾಡಿ, ಶಿಕ್ಷಣ ಇಲಾಖೆಯ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೋಣನೂರಿನ ಸರ್ಕಾರಿ ಶಾಲೆಯಲ್ಲಿ ಸುಮಾರು 120ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 120 ವಿದ್ಯಾರ್ಥಿಗಳಿಗೆ ಕೇವಲ ಮೂವರು ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಆಂಗ್ಲ ಭಾಷಾ ಶಿಕ್ಷಕರಾದ ಅನಿಲ್ ಎಂಬುವರನ್ನು ವರ್ಗಾವಣೆ ಮಾಡಿದ್ದಾರೆ. ಮುಖ್ಯ ಶಿಕ್ಷಕರ ಹುದ್ದೆಯು ಖಾಲಿ ಇದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ. ಕೂಡಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು ಇನ್ನು ಮೂರ್ನಾಲ್ಕು ದಿನಗಳ ಒಳಗಾಗಿ ವರ್ಗಾವಣೆ ರದ್ದು ಮಾಡಿ ಆಂಗ್ಲ ಭಾಷಾ ಶಿಕ್ಷಕರಾದ ಅನಿಲ್ ಅವರನ್ನು ಈ ಶಾಲೆಯಲ್ಲಿಯೇ ಮುಂದುವರಿಸಬೇಕು. ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡಬೇಕು. ಇಲ್ಲವಾದಲ್ಲಿ ಗ್ರಾಮಸ್ಥರ ಜೊತೆಗೂಡಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ಎಸ್ ಬಸವಣ್ಣ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಎಂ‌. ಬಸವಣ್ಣ, ರಾಜ್ಯ ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ವಿಶ್ವನಾಥ್, ಸದಸ್ಯರಾದ ಮಹದೇವಸ್ವಾಮಿ, ಬಸವಣ್ಣ, ಬಸಮ್ಮಣಿ, ಪವಿತ್ರ, ಮಹದೇವಮ್ಮ, ಮಧು, ಅಭಿಲಾಷ್, ಭಾಗ್ಯಮ್ಮ, ಸುಮಲತಾ, ಪುಟ್ಟಸುಬ್ಬಪ್ಪ , ನಟರಾಜು, ಪಟೇಲ್ ಬಸಪ್ಪ, ಕುಮಾರ್, ಬೆಳಿಗಿರಿಶೆಟ್ಟರು ಸೇರಿದಂತೆ ಶಾಲಾ ಮಕ್ಕಳು ಇದ್ದರು.

Tags:
error: Content is protected !!