ಮೈಸೂರು

ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ ಶಿಕ್ಷಕ: ಪ್ರಶ್ನಿಸಿದ ವ್ಯಕ್ತಿಗೆ ಚಾಕು ಇರಿತ

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ ಕೇಳಿಬಂದಿದೆ.

ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಿ.ಎಂ.ಗೋಪಾಲ್‌ ಆತನ ಪುತ್ರ ಅಭಿಷೇಕ್‌ ಅವರಿಗೆ ಚಾಕುವಿನಿಂದ ಇರಿಯಲಾಗಿದೆ.

ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿ.ಎನ್.ಮಂಜುನಾಥ್‌ ಕೃತ್ಯವೆಸಗಿದ ಆರೋಪ ಕೇಳಿಬಂದಿದೆ.

ಸಿ.ಎಂ.ಗೋಪಾಲ್‌ ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಕ ಮಂಜುನಾಥ್‌ನನ್ನು ಸಾಲಿಗ್ರಾಮ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕ ಮಂಜುನಾಥ್‌ನನ್ನು ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…

27 mins ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…

3 hours ago

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…

3 hours ago

ಓದುಗರ ಪತ್ರ: ಇಷ್ಟೊಂದು ಸಿಗ್ನಲ್ ಲೈಟ್‌ಗಳು ಅಗತ್ಯವೇ?

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…

3 hours ago

ಓದುಗರ ಪತ್ರ: ಪಿಜ್ಜಾ,ಬರ್ಗರ್ ಸೆಂಟರ್ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇರಲಿ

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

4 hours ago