ಮೈಸೂರು : ದುಷ್ಕರ್ಮಿಗಳು ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚುಂಚನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಮಾದಯ್ಯನಗುಡಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಈ ಘಟನೆ ನಡೆದಿದೆ. ರಾತ್ರಿಯ ಸಮಯದಲ್ಲಿ ಕಳ್ಳರು ಒಳ ನುಗ್ಗಿ ಬಾಗಿಲು ಮುರಿದು, ಹುಂಡಿಯ ಬೀಗವನ್ನು ಒಡೆದು ಹುಂಡಿಯಲ್ಲಿದ್ದ ನಗದು ಹಣ ಹಾಗೂ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.
ನಿನ್ನೆ ತಾನೇ ಎರಡು ದಿನಗಳ ಕಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆದಿತ್ತು. ಇಂದು ಗ್ರಾಮಸ್ಥರು ಹುಂಡಿ ಎಣಿಕೆ ಕಾರ್ಯ ಮಾಡಬೇಕಾಗಿತ್ತು. ಆದರೆ, ಖದೀಮರು ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕವಲಂದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…
ಬೆಂಗಳೂರು: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…