Mysore
13
scattered clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಮೈಸೂರು | ದೇವಸ್ಥಾನದ ಅರ್ಚಕ ಹೃದಯಾಘಾತಕ್ಕೆ ಬಲಿ

Auto driver dies of heart attack in Hassan

ಮೈಸೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಮತ್ತೋರ್ವರು ಬಲಿಯಾಗಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಈ ಘಟನೆ ನಡೆದಿದ್ದು, ಸಂಪತ್‌ ಕುಮಾರ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ.

ಸಂಪತ್‌ ಕುಮಾರ್‌ ಗುಂಜಾನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದರು. ಮೂಲತಃ ಚಾಮರಾಜನಗರದ ಯಳಂದೂರು ನಿವಾಸಿಯಾಗಿದ್ದರು. ತಡರಾತ್ರಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Tags:
error: Content is protected !!