ಮೈಸೂರು: ಇಲ್ಲಿನ ಮಾದಹಳ್ಳಿಯಲ್ಲಿ ಇಂದು ಶ್ರೀ ವೀರಭದ್ರೇಶ್ವರ, ಶ್ರೀ ಮಹದೇಶ್ವರ, ಶ್ರೀ ಬಸವೇಶ್ವರಸ್ವಾಮಿ ಮತ್ತು ಶ್ರೀ ಸಿದ್ದಪ್ಪಾಜಿ ದೇವಸ್ಥಾನಗಳ ಜೀರ್ಣೋದ್ಧಾರ, ಅಂಕಸ್ಥಾಪನೆ ಹಾಗೂ ಕಳಶಾರೋಹಣ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ದೇವರ ದರ್ಶನಾಶೀರ್ವಾದ ಪಡೆದರು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ರಮಗಳು ಧರ್ಮ ಪರಂಪರೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ಈ ಪರಮ ಪವಿತ್ರ ಕಾರ್ಯಗಳಿಗೆ ಎಲ್ಲರೂ ಕೈಗೊಡಿಸಬೇಕು ಎಂದು ಮನವಿ ಮಾಡಿದರು.
ಸಮಾರಂಭದಲ್ಲಿ ಸುತ್ತೂರು ಶ್ರೀಮಠದ ಶ್ರೀ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವ ಸಿದ್ಧೇಶ್ವರ ಮಹಾಸ್ವಾಮಿಗಳು, ಮಹಾಂತ ಶ್ರೀಗಳು, ಶ್ರೀ ಚನ್ನಬಸವ ಶ್ರೀಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ವಿವಿಧ ಮಠಗಳ ಪರಮಪೂಜ್ಯರು, ಹರಗುರು ಚರಮೂರ್ತಿಗಳು ಹಾಗೂ ಸಮಾಜದ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…