ಮೈಸೂರು: ಟಿಪ್ಪರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು-ಊಟಿ ರಸ್ತೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಮಾದಪಟ್ಟಣ ಗೇಟ್ ಬಳಿ ದುರಂತ ಸಂಭವಿಸಿದ್ದು, ಓವರ್ ಟೇಕ್ ಮಾಡುವ ಬರದಲ್ಲಿ ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೇರಳದ ಕಲ್ಪೆಟ್ಟ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮೈಸೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.





