ಮೈಸೂರು

ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಮೈಸೂರು :  ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಹೆಳವರಮಂಡಿ ಬಳಿ ಅಪಘಾತ ಸಂಭವಿಸಿದ್ದು, ಆದಿಬೆಟ್ಟಳ್ಳಿ ಗ್ರಾಮದ ನಿವಾಸಿ ನಾಗರಾಜ್ (೩೫) ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ಬಿಳಿಗಿರಿ (೩೦) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

4 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago