Mysore
22
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

ಭೀಕರ ರಸ್ತೆ ಅಪಘಾತ : ಮಹಿಳೆ ತಲೆ ಪಿಸ್‌ ಪಿಸ್‌

ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಜಜ್ಜಿಕೊಂಡು ಹೋಗಿರುವ ಘಟನೆ ಮೈಸೂರು-ಊಟಿ ರಸ್ತೆಯ ನಂಜನಗೂಡಿನ ಮುದ್ದಹಳ್ಳಿ ಬಳಿ ನಡೆದಿದೆ.

ಶನಿವಾರ ಮಧ್ಯಾಹ್ನ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದಾರೆ. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಲಾರಿಯೊಂದ ಮಹಿಳೆಯ ತಲೆಯನ್ನು ಕತ್ತರಿಸಿಕೊಂಡು ಹೋಗಿದೆ. ಪರಿಣಾಮ ದೇಹದಿಂದ ರುಂಡ ಬೇರ್ಪಟ್ಟಿದೆ.

ಘಟನೆ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಲಾರಿ ಮತ್ತೆ ಹಚ್ಚುವ ಕಾರ್ಯ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.

Tags: