ಮೈಸೂರು

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಖಡಕ್ ಉತ್ತರ ನೀಡಿದರು.

ಅವರು ಇಂದು ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ವತಿಯಿಂದ ಪಿರಿಯಾಪಟ್ಟಣದ ಪಾರೆಕೊಪ್ಪಲಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಕ್ತಿ ದೇವತೆ ಶ್ರೀ ಮಸಣಿಕಮ್ಮ ದೇವಸ್ಥಾನ ನಿರ್ಮಾಣ, ಒಕ್ಕಲಿಗ ಸಂಘದ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ಹಾಗೂ ಬೆಟ್ಟದ ಪುರ ಗ್ರಾಮದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗಳ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾಮಗಾರಿಗಳು ಆಗುತ್ತಿದ್ದು, ಈ ಬಾರಿಯ ಆಯವ್ಯಯದಲ್ಲಿ ಸುಮಾರು 82 ಸಾವಿರ ಕೋಟಿ ರೂಗಳನ್ನು ಅಭಿವೃದ್ಧಿ ಕೆಲಸಗಳಿಗೆ ಮೀಸಲಿರಿಸಿದೆ ಎಂದರು.

ಕುವೆಂಪು ಅವರು ವಿಶ್ವಮಾನವರಾಗುವ ಪ್ರಯತ್ನವನ್ನು ಮಾಡಿದ್ದರು. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕು ಎಂದು ಬಯಸಿದ್ದರು. ಎಲ್ಲರೂ ಮನುಷ್ಯರಾಗಿ ಬಾಳಬೇಕೆನ್ನುವ ಆಶಯವನ್ನು ಹೊಂದಿದ್ದ ಕುವೆಂಪು ಅವರ ಭವನ ಇಲ್ಲಿ ನಿರ್ಮಾಣವಾಗುತ್ತಿರುವುದು ಸ್ವಾಗತಾರ್ಹ ಎಂದರು.

ಬೆಟ್ಟದಪುರ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ ಕಾಮಗಾರಿಯನ್ನು 50 ಕೋಟಿ ರೂ ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು, ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.

ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಮುಂದೆಯೂ ಈ ಯೋಜನೆಗಳನ್ನು ಮುಂದುವರೆಸಲಾಗುವುದು. ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ವಿರೋಧ ಪಕ್ಷ ಪ್ರಸ್ತುತ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಅಭಿವೃದ್ಧಿಗೂ ಹಣವನ್ನು ಮೀಸಲಿರಿಸಿದೆ ಎನ್ನಲು ಇಂದು ಶಂಕು ಸ್ಥಾಪನೆಯಾಗಿರುವ 419.78 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳೇ ಸಾಕ್ಷಿ ಎಂದರು.

ವಿರೋಧ ಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿದ್ದು ಅದರಲ್ಲಿ ಸತ್ಯಾಂಶವಿಲ್ಲ. ಟೀಕೆಗಳು ವಾಸ್ತವದ ನೆಲೆಗಟ್ಟಿನಲ್ಲಿರಬೇಕು. ಸುಳ್ಳು ಹೇಳುವುದನ್ನೇ ಕಸಬು ಮಾಡಿಕೊಳ್ಳದೆ ಕೈಗೊಂಡಿರುವ ಕೆಲಸಗಳ ಬಗ್ಗೆ ಮಾತನಾಡಬೇಕು. ಅವರು ಅಧಿಕಾರದಲ್ಲಿದ್ದಾಗ ನಾಲ್ಕು ವರ್ಷಗಳ ಕಾಲ ಏನು ಮಾಡಿದ್ದಾರೆಂದು ಜನರ ಮುಂದಿಡಬೇಕು. ನಾವು ಅಭಿವೃದ್ಧಿ ಕಾರ್ಯಗಳ ಮೂಲಕವೇ ಬಿಜೆಪಿಯ ಅಪಪ್ರಚಾರಕ್ಕೆ ಉತ್ತರ ಕೊಡುತ್ತಿದ್ದೇವೆ ಎಂದರು.

ಜನ ನಮ್ಮ ಸರ್ಕಾರದ ಪರವಾಗಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದ್ದು, 2028ರ ಚುನಾವಣೆಯಲ್ಲಿಯೂ ಗೆಲ್ಲಲಿದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ವೆಂಕಟೇಶ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಶಾಸಕರಾದ ಹರೀಶ್ ಗೌಡ ರವಿಶಂಕರ್, ದರ್ಶನ್ ಧ್ರುವನಾರಾಯಣ್, ಮೊದಲಾದವರು ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

15 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

15 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

15 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

15 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

15 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

15 hours ago