ಮೈಸೂರು

ದೇಹವೇ ದೇಗುಲ; ದುಶ್ಚಟಗಳಿಂದ ದೂರವಿರಿ : ಶಿವರಾಜು ಸಲಹೆ

ಮೈಸೂರು: ದೇಹ ಎಂಬುದು ದೇಗುಲ ಇದ್ದಂತೆ. ದೇಗುಲವನ್ನು ನೋಡಿದರೆ ಪೂಜ್ಯನೀಯ ಭಾವ ಮೂಡುತ್ತದೆ. ಹೀಗೆಯೆ ನಮ್ಮ ದೇಹವನ್ನು ನೋಡಿಕೊಳ್ಳಬೇಕು. ಆದುದರಿಂದ ಎಲ್ಲಾ ದುಶ್ಚಟಗಳಿಂದ ದೂರವಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ಸಲಹೆ ನೀಡಿದರು.

ಮಹಾರಾಜ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾರಾಜ ಪದವಿ ಪೂರ್ವ ಕಾಲೇಜು, ಮೈಸೂರು ಸಹಯೋಗದೊಂದಿಗೆ ಬುಧವಾರ ಆಯೋಜಿಸಲಾಗಿದ್ದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಜೀವನದಲ್ಲಿ ಯಾರಾದರೂ ಏಳಿಗೆ ಕಂಡಿಲ್ಲ ಎಂದರೆ ಅವರು ಯಾವುದಾದರೊಂದು ದುಶ್ಚಟಗಳಿಗೆ ಬಲಿಯಾಗಿರುತ್ತಾರೆ. ಅಂತಹವರಿಗೆ ಸಮಾಜದಲ್ಲಿ ಯಾವುದೇ ರೀತಿಯ ಗೌರವ ಸಿಗುವುದಿಲ್ಲ. ಸಮಾಜದಲ್ಲಿ ನಮಗೆ ಗೌರವ ಸಿಗಬೇಕೆಂದರೆ ಶುಭ್ರವಾಗಿ ಬದುಕಬೇಕು ಹಾಗೂ ದೇಹವನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದರು.

ಕಾಲೇಜು ಹಂತಗಳಲ್ಲಿ ವಿದ್ಯಾರ್ಥಿಗಳು ಯಾವ ಸಾಧನೆಯನ್ನಾದರೂ ಮಾಡುವ ಉತ್ಸಾಹದಲ್ಲಿರುತ್ತಾರೆ. ಹೀಗಾಗಿ ಸಾಧನೆಯ ಕಡೆ ಹೆಚ್ಚಿನ ಗಮನ ನೀಡಬೇಕು. ದುಶ್ಚಟಗಳಿಂದ ದೂರವಿರಬೇಕು. ಟಿ.ವಿ, ಮೊಬೈಲ್ ಗಳಿಗೆ ದಾಸರಾದರೆ ಮನೋರೋಗ ತಜ್ಞರ ಸಹಾಯದಿಂದ ಹೊರಬರಬಹುದು. ಆದರೆ ಸಿಗರೇಟ್, ಗಾಂಜಾದಂತಹ ದುಶ್ಚಟಗಳು ರಕ್ತದಲ್ಲಿ ಬೆರೆತು ಹೋದರೆ ಅದರಿಂದ ಹೊರಬರಲು ಬಹಳ ಕಠಿಣ ಎಂದರು.

ವಿದ್ಯಾರ್ಥಿಗಳು ಚಲನಚಿತ್ರದಲ್ಲಿ ಬರುವ ಹೀರೋಗಳನ್ನು ಅನುಕರಣೆ ಮಾಡಬಾರದು. ಇದರಿಂದ ನಮ್ಮ ದೇಹದ ಮೇಲೆ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರುತ್ತದೆ. ನಮಗೆ ನಾವೇ ಹೀರೋಗಳಾಗಬೇಕು. ಇತರರಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.

ಪತ್ರಕರ್ತ ಸಿ.ಕೆ.ಮಹೇಂದ್ರ ಮಾತನಾಡಿ, ಇಂತಹ ಕಾರ್ಯಕ್ರಮ ಎಲ್ಲಾ ಶಾಲೆಗಳಲಿ ನಡೆಯಬೇಕು. ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಪಾಕೆಟ್ ಮನಿ ಸಿಗುತ್ತದೆ. ಇದರಿಂದ ಅವರಿಗೆ ವಿವಿಧ ಆಕರ್ಷೆಣೆಗೆ ಒಳಗಾಗುವ ಹಂತದಲ್ಲಿರುತ್ತಾರೆ. ಈ ವಯಸ್ಸಿನಲ್ಲಿಯೇ ಏನು ಬೇಕಾದರೂ ಕಲಿಯಬಹುದು. ಯಾವ ಸಾಧನೆಯನ್ನಾದರೂ ಮಾಡಬಹುದು ಎಂದರು.

ಮನೋರೋಗ ತಜ್ಞ ಡಾ.ಬಿ.ಎನ್.ರವೀಶ್ ಮಾತನಾಡಿ, ವಿದ್ಯಾಥಿಗಳಲ್ಲಿ ತಾಳ್ಮೆ ಹಾಗೂ ಶ್ರದ್ಧೆ ಕಾಣುತ್ತಿಲ್ಲ. ಇವೆರಡು ಇಲ್ಲ ಎಂದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಿಲ್ಲ.ನಮ್ಮ ಬದುಕಿಗೆ ನಾವೆ ಶಿಲ್ಪಿಗಳಾಗಬೇಕು. ಎಂದಿಗೂ ಕೀಳಿರಮೆ ಇಟ್ಟುಕೊಳ್ಳಬೇಡಿ. ಜೀವನ ಸಂತೋಷದ ಕ್ಷಣಗಳನ್ನು ಅನುಭವಿಸುವುದಕ್ಕೆ ಇರಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಹೋಟೆಲ್ ಊಟದ ಸೇವನೆ ಹೆಚ್ಚಾಗುತ್ತಿದೆ. ಇದು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಮನೆಯಲ್ಲೇ ತಯಾರಿಸಿಸ ಊಟವನ್ನು ಸೇವಿಸಬೇಕು ಎಂದು ಸಲಹೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ ನಾಗರಾಜು, ಮಹಾರಾಜ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಉದಯಶಂಕರ್‌, ತಂಬಾಕು ವಿರೋಧಿ ವೇದಿಕೆ ಸಂಚಾಲಕರಾದ ವಸಂತಕುಮಾರ್ ಮೈಸೂರು ಮಠ್, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ರಮೇಶ್ , ಮಹಾರಾಣಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಗೋವಿಂದ ರಾಜು ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

7 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

8 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

8 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

9 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

9 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

9 hours ago