ಮೈಸೂರು

ಎಲೆತೋಟದಲ್ಲಿದ್ದ ಮೊಸಳೆ ರಾಮಾನುಜ ರಸ್ತೆಯ ಕೆರೆಗೆ ಬಂತು!

ಮೈಸೂರು : ಜಿಣುಗುಟ್ಟುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಸಾಕಷ್ಟು ಕಾಲುವೆಗಳು ತುಂಬಿ ಹರಿಯುತ್ತಿವೆ. ಕಳೆದ ಅಕ್ಷೋಬರ್‌ ನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಜೆಎಲ್‌ ಬಿ ರಸ್ತೆಯ ಚಾಮುಂಡಿಪುರಂ ಸಮೀಪದ  ರಾಜಕಾಲುವೆಯಲ್ಲಿ  ಹರಿದುಬಂದ ನೀರಿನೊಟ್ಟಿಗೆ ಮೊಸಳೆಯೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಮೂರ್ನಾಲ್ಕು ಗಂಟೆಗಳ ತನಕ ಈ ಮೊಸಳೆ ಇಲ್ಲಿಯೇ ಇತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಅದು ಪೊದೆಗಳ ಮಧ್ಯೆ ಮರೆಯಾಗಿದ್ದರಿಂದ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಅಕ್ಟೋಬರ್‌ 29 ರಂದು ಮೊಸಳೆ ನೀರಿನಿಂದ ಮೇಲೆ ಬಂದು ಸೀವೇಜ್‌ ಫಾರಂ ಬಳಿಯ ಕಾಲ ಸಂಕದ ಪಕ್ಕದಲ್ಲಿ ವಿಶ್ರಾಂತಿ ಪಡೆಯುತ್ತಿತ್ತು. ಜನರ ಸದ್ದು ಗದ್ದಲದ ನಡುವೆ ಸಾಕಷ್ಟು ಕಾಲ ಮೊಸಳೆ ಈ ಜಾಗ ಬಿಟ್ಟು ಕದಲಿರಲಿಲ್ಲ. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆ ಹಿಡಿಯಲು ಮತ್ತೆ ವಿಫಲವಾದರು ಪರಿಣಾಮ ಇಂದು ಬೆಳಿಗ್ಗೆ ನಗರದ ರಾಮಾನುಜ ರಸ್ತೆಯ  9ನೇ ಕ್ರಾಸ್‌ ಬಳಿ ಇರುವ ಕೆರೆಯ ದಡದಲ್ಲಿ ಮೊಸಳೆ ಬಾಯಿಗೆ ಹಸು ಬಲಿಯಾಗಿರುವ ಘಟನೆ ನಡೆದಿದ್ದು ಅದೇ ಮೊಸಳೆಯೇ ಹಸುವನ್ನು ತಿಂದು ಹಾಕಿದೆಯೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ನೀರನ್ನು ಕುಡಿಯಲು ಹೋದ ಹಸುವನ್ನು ಎಳೆದೊಯ್ದು ಮೊಸಳೆ ತಿಂದು ಹಾಕಿದೆ ಎನ್ನುತ್ತಿದ್ದಾರೆ. ಆದರೆ ಸಾವಿಗೀಡಾದ ಹಸುವಿನ ಮಾಲೀಕರು ಹಸು ಸಾವಿಗೆ ಮೊಸಳೆಯೇ ಕಾರಣ ಇಂದು ಬೆಳಿಗ್ಗೆ ಮೇಯಲು ಬಿಟ್ಟಿದ್ದ ಹಸುವನ್ನು ಮೊಸಳೆಯೇ ಕೆರೆಯ ಒಳಗೆ ಎಳೆದುಕೊಂಡು ಹೋಗಿರುವುದನ್ನು ನಾವೇ ನೋಡಿದ್ದೇವೆ ಹಸು ಸಾವಿಗೆ ಮೊಸಳೆಯೇ ಕಾರಣ ಎಂದು ಹೇಳುತ್ತಿದ್ದಾರೆ.  ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆಹಿಡಿಯಲು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಆರ್‌ ಎಫ್‌ ಓ ಸುರೇಂದ್ರ, ಡಿ ಆರ್‌ ಎಫ್‌ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿದಂತೆ ಒಟ್ಟು 6 ಜನ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಬಗ್ಗೆ ಆಂದೋಲನದೊಟ್ಟಿಗೆ ಮಾತನಾಡಿ ಅವರು ಮೊಸಳೆಯನ್ನು ಹಿಡಿಯಲು ಬೆಳಿಗ್ಗೆ 11.30 ರಿಂದ  ಕಾರ್ಯಾಚರಣೆಯ ಆರಂಭವಾಗಿದ್ದು, ಕೆರೆಯಲ್ಲಿರುವ ನೀರನ್ನು ಮೋಟಾರ್‌ ಬಳಸಿ  ಹೊರೆಚೆಲ್ಲಿಸಿ ತದ ನಂತರ ಮೊಸಳೆಯನ್ನು ಸೆರೆ ಹಿಡಿಯಲಾಗುವುದು ಎಂದರು. ಇವತ್ತಿನ ಕಾರ್ಯಚರಣೆಯಲ್ಲಿ ಮೊಸಳೆ ಸಿಗದ ಕಾರಣ ನಾಳೆ ಬೆಳಿಗ್ಗೆ ಮತ್ತೆ ಕಾರ್ಯಚರಣೆ ಆರಂಭಿಸುತ್ತೇವೆ ಎಂದು ಅರಣ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

andolana

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago