ಮೈಸೂರು

ಉದ್ಯಮಿ ಪುತ್ರನ ಮೃತದೇಹ ಸಂಪ್‌ನಲ್ಲಿ ಪತ್ತೆ

ಮೈಸೂರು : ಉದ್ಯಮಿಯೊಬ್ಬರ ಪುತ್ರನ ಶವ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್‌ನಲ್ಲಿ ಭಾನುವಾರ ಪತ್ತೆಯಾಗಿದೆ. ಮೃತರನ್ನು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಕೆ.ಎಂ. ಚೆರಿಯನ್ ಅವರ ಪುತ್ರ ಕ್ರಿಸ್ಟೋ ಚೆರಿಯನ್ (35) ಎಂದು ಗುರುತಿಸಲಾಗಿದೆ.

ವಿಜಯನಗರ ಮೊದಲನೇ ಹಂತದ ನಿವಾಸಿ ಕ್ರಿಸ್ಟೋ ಶನಿವಾರ ರಾತ್ರಿ ಮನೆಯಿಂದ ತೆರಳಿದ್ದರು. ತಡರಾತ್ರಿಯಾದರೂ ಬಂದಿರಲಿಲ್ಲ. ಕುಟುಂಬದವರು ಹುಡುಕುವ ಪ್ರಯತ್ನ ಮಾಡಿದ್ದರು. ಈ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿನ ನೀರಿನ ಸಂಪ್‌ನಲ್ಲಿ ಭಾನುವಾರ ಶವ ಸಿಕ್ಕಿದೆ.

ಮಾಹಿತಿ ತಿಳಿದ ಪೊಲೀಸರು ಶ್ವಾನದಳ, ವಿಧಿವಿಜ್ಞಾನ ತಜ್ಞರ ತಂಡದ ಜೊತೆಗೆ ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಹೊರತೆಗೆದಿದ್ದಾರೆ. ಪೋಷಕರು ನೀಡಿದ ದೂರಿನ ಮೇರೆಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

lokesh

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

1 hour ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

1 hour ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

1 hour ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

2 hours ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

2 hours ago