ಮೈಸೂರು : ಉದ್ಯಮಿಯೊಬ್ಬರ ಪುತ್ರನ ಶವ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್‌ನಲ್ಲಿ ಭಾನುವಾರ ಪತ್ತೆಯಾಗಿದೆ. ಮೃತರನ್ನು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಕೆ.ಎಂ. ಚೆರಿಯನ್ ಅವರ ಪುತ್ರ ಕ್ರಿಸ್ಟೋ ಚೆರಿಯನ್ (35) ಎಂದು ಗುರುತಿಸಲಾಗಿದೆ.
ವಿಜಯನಗರ ಮೊದಲನೇ ಹಂತದ ನಿವಾಸಿ ಕ್ರಿಸ್ಟೋ ಶನಿವಾರ ರಾತ್ರಿ ಮನೆಯಿಂದ ತೆರಳಿದ್ದರು. ತಡರಾತ್ರಿಯಾದರೂ ಬಂದಿರಲಿಲ್ಲ. ಕುಟುಂಬದವರು ಹುಡುಕುವ ಪ್ರಯತ್ನ ಮಾಡಿದ್ದರು. ಈ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿನ ನೀರಿನ ಸಂಪ್‌ನಲ್ಲಿ ಭಾನುವಾರ ಶವ ಸಿಕ್ಕಿದೆ.
ಮಾಹಿತಿ ತಿಳಿದ ಪೊಲೀಸರು ಶ್ವಾನದಳ, ವಿಧಿವಿಜ್ಞಾನ ತಜ್ಞರ ತಂಡದ ಜೊತೆಗೆ ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಹೊರತೆಗೆದಿದ್ದಾರೆ. ಪೋಷಕರು ನೀಡಿದ ದೂರಿನ ಮೇರೆಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…