ಕೆ ಆರ್ ನಗರ :ಮೈಸೂರು ಜಿಲ್ಲೆ ತಿ ನರಸೀಪುರ ತಾಲ್ಲೂಕಿನ ನಿಲಸೋಗೆ ಗ್ರಾಮದಲ್ಲಿ ಮೂವರು ರೈತರು ವಿದ್ಯುತ್ ತಂತಿ ತುಳಿದು ಮೃತಪಟ್ಟ ಬೆನ್ನಲ್ಲೇ ಮನೆ ಮುಂದೆ ಮರಕ್ಕೆ ವಿದ್ಯುತ್ ಸ್ಪರ್ಶಗೊಂಡು ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ಹೆಬ್ಬಾಳು ಹೋಬಳಿ ಮಳಲಿ ಗ್ರಾಮದಲ್ಲಿ ಇಂದು ನಡೆದಿದೆ. ಮಳಲಿ ಗ್ರಾಮದ ಕಾಡೇಗೌಡರ ಮಗ ಮನೋಜ್ (16) ಮೃತ ದುರ್ದೈವಿ.
ಈತ ಮಾವತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಬೆಳಗ್ಗೆ ಮನೆ ಮುಂದೆ ಇರುವ ನುಗ್ಗೆ ಮರದ ಬಳಿ ನಿಂತಿರುವಾಗ ಮರಕ್ಕೆ11ಕೆ.ವಿ. ವಿದ್ಯುತ್ ತಂತಿ ಸ್ಪರ್ಶಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಕಾಡೇಗೌಡರ ಇಬ್ಬರು ಮಕ್ಕಳ ಪೈಕಿ ಈತ ಮೊದಲ ಮಗನಾಗಿದ್ದಾನೆ.
ನಿಲಸೋಗೆ ಗ್ರಾಮದಲ್ಲಿ ಮೂವರು ರೈತರು ವಿದ್ಯುತ್ ತಂತಿಯಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಸೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕ್ಕೆ ಶಾಲಾ ಬಾಲಕನೊಬ್ಬ ಬಲಿಯಾಗಿರುವುದು ಗ್ರಾಮಸ್ಥರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದರು.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…