Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

CM

ಮೈಸೂರು/ಸಿದ್ಧರಾಮನಹುಂಡಿ : ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌

ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.

ಪ್ರಾರ್ಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಇಲ್ಲಿ ನಡೆಯುತ್ತಿದೆ. ಪದವಿ ಕಾಲೇಜಿಗೆ ವಿದ್ಯಾರ್ಥಿಗಳು ದೊರೆಯುವುದಿಲ್ಲ ಎಂದು ಪದವಿ ಕೋರ್ಸು ತೆರೆದಿಲ್ಲ ಎಂದರು. ಆದರೆ ಊರಿನಲ್ಲಿ ಇತರೆ ಸೌಲಭ್ಯಗಳಾದ ಬಿಸಿಎಂ ವಿದ್ಯಾರ್ಥಿ ನಿಲಯ, ಪಶು ಚಿಕಿತ್ಸಾ ಕೇಂದ್ರ , ಗ್ರಂಥಾಲಯ, ಸಮುದಾಯ ಆರೋಗ್ಯ ಕೇಂದ್ರಗಳು ಇವೆ ಎಂದರು.

ಸರ್ಕಾರದ ಅಭಿವೃದ್ಧಿಯನ್ನು ಕಾಣದಿರುವ ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದರು.

Tags:
error: Content is protected !!