ಮೈಸೂರು

ನಾಲ್ಕನೇ ದಿನಕ್ಕೆ ಕಾಲಿರಿಸಿದ ಸುತ್ತೂರು ಜಾತ್ರಾ ಮಹೋತ್ಸವ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವವೂ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.

ಸುತ್ತೂರು ಜಾತ್ರಾ ಮಹೋತ್ಸವವೂ ಇಂದು(ಜನವರಿ.29) ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಅದ್ದೂರಿಯಾಗಿ ನಡೆಯುತ್ತಿದ್ದು, ಸಾವಿರಾರು ಸಾರ್ವಜನಿಕರು ಜಾತ್ರೆಗೆ ಭೇಟಿ ನೀಡಿದ್ದಾರೆ.

ಈ ಸುತ್ತೂರು ಜಾತ್ರೆ ಅತ್ಯಂತ ಐತಿಹಾಸಿಕ ಮತ್ತು ವಿಶಿಷ್ಟವಾಗಿದ್ದು, ನಾಡಿನಾದ್ಯಂತ ಹೆಸರಾಗಿದೆ. ಜಾತ್ರೆ ನಾಡಿನ ಸಂಸ್ಕೃತಿ, ಜನಪದ, ಮತ್ತು ಕಲೆಗಳಿಗೆ ಅಪಾರ ಬೆಂಬಲ ನೀಡುತ್ತಿದೆ.

ಈ ಸಂದರ್ಭದಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹಾಸನ ಸಂಸದರಾದ ಶ್ರೇಯಸ್ ಪಟೇಲ್, ಶಾಸಕರಾದ ಸಿ‌.ಸಿ ಪಾಟೀಲ್, ಅರವಿಂದ ಬೆಲ್ಲದ್ ಇನ್ನಿತರರು ಉಪಸ್ಥಿತರಿದ್ದರು.

ಇನ್ನೂ ಸಂಜೆ 7 ಗಂಟೆಗೆ  ಜರುಗಲಿರುವ ವಿಶೇಷ ತೆಪ್ಪೋತ್ಸವವನ್ನು  ಕಣ್ತುಂಬಿಕೊಳ್ಳಲು ಅನೇಕ ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

4 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

4 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

4 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

4 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

4 hours ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

4 hours ago