Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

ʼಕೈʼ ನಾಯಕರಲ್ಲಿ ರಕ್ತ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲದು : ಸುರ್ಜೆವಾಲ!

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುವಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೆಯೇಂದ್ರ ಅವರು ಪ್ರತೀ ದಿನ ನಮ್ಮ ಗ್ಯಾರಂಟಿ ಯೋಜನೆ ಬಗ್ಗೆಯೇ ಮಾತನಾಡುತ್ತಾರೆ. ನಮ್ಮ ಯೋಜನೆಯನ್ನು ನೀವೇಕೆ ವಿರೋಧಿಸುತ್ತೀರಿ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಏಕೆ ಅಪಮಾನ ಮಾಡುತ್ತೀರಿ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದರು.

ಭಾನುವಾರ ನಗರದ ಬೋಗಾದಿಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರತಿನಿತ್ಯ ೩೫ ಲಕ್ಷ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಾಯಾಣಿಸುವ ಮೂಲಕ ಶಕ್ತಿಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದರು.

ಸುವಾರು ೧.೨೧ ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ೧.೮೦ ಕೋಟಿ ಮಂದಿ ಗೃಹ ಜ್ಯೋತಿ ಫಲಾನುಭವಿಗಳಾಗಿದ್ದಾರೆ. ಆದ್ದರಿಂದ ಮೈತ್ರಿ ಪಕ್ಷಗಳು ನೀಡುತ್ತಿರುವ ಹೇಳಿಕೆಗಳು ಯೋಜನೆಯ ಫಲಾನುಭವಿಗಳನ್ನು ಅಪಮಾನ ಮಾಡಿದಂತಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಚುನಾವಣೆ ಮುಗಿದಮೇಲೆ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆ  ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುವಾರ್ ಸೇರಿದಂತೆ ಕಾಂಗ್ರೆಸ್ ನಾಯಕರುಗಳ ರಕ್ತ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ಪಕ್ಷದ ನಾಯಕರು, ಮುಖಂಡರು, ಜಿಲ್ಲಾ ಮಟ್ಟದ ಪದಾಧಿಕಾರಿಗಳ ರಕ್ತದ ಪ್ರತಿಕಣಕಣದಲ್ಲೂ ಗ್ಯಾರಂಟಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಬದ್ಧತೆ ಇದೆ.

ನಮ್ಮ ದೇಹದಲ್ಲಿ ಒಂದು ಹನಿ ರಕ್ತ ಸಂಚಾರವಿರುವ ತನಕವೂ ನಾವು ಯೋಜನೆಗಳನ್ನು ನಿಲ್ಲಿಸಲು ಹೋಗುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನ ಬದಲಾವಣೆ ಬಿಜೆಪಿ ಡಿಎನ್‌ಎಯಲ್ಲಿ ಇದೆ. ಇದರ ಜೊತೆಗೆ ದಲಿತ, ರೈತ, ಮಹಿಳಾ ವಿರೋಧಿ ಡಿಎನ್‌ಎ ಕೂಡ ಬಿಜೆಪಿ ಹೊಂದಿದೆ. ಅವರ ಪಕ್ಷದ ಅಭ್ಯರ್ಥಿಗಳು ಸಂವಿಧಾನ ಬದಲಾವಣೆ ಮಾಡುತೇವೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರೂ ಏಕೆ ಕ್ರಮ ಕೈಗೊಂಡಿಲ್ಲ. ಇದರಿಂದ ಅವರ ನಿಲುವು ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

 

Tags:
error: Content is protected !!