ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುವಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೆಯೇಂದ್ರ ಅವರು ಪ್ರತೀ ದಿನ ನಮ್ಮ ಗ್ಯಾರಂಟಿ ಯೋಜನೆ ಬಗ್ಗೆಯೇ ಮಾತನಾಡುತ್ತಾರೆ. ನಮ್ಮ ಯೋಜನೆಯನ್ನು ನೀವೇಕೆ ವಿರೋಧಿಸುತ್ತೀರಿ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಏಕೆ ಅಪಮಾನ ಮಾಡುತ್ತೀರಿ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದರು.
ಭಾನುವಾರ ನಗರದ ಬೋಗಾದಿಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪ್ರತಿನಿತ್ಯ ೩೫ ಲಕ್ಷ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಾಯಾಣಿಸುವ ಮೂಲಕ ಶಕ್ತಿಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದರು.
ಸುವಾರು ೧.೨೧ ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ೧.೮೦ ಕೋಟಿ ಮಂದಿ ಗೃಹ ಜ್ಯೋತಿ ಫಲಾನುಭವಿಗಳಾಗಿದ್ದಾರೆ. ಆದ್ದರಿಂದ ಮೈತ್ರಿ ಪಕ್ಷಗಳು ನೀಡುತ್ತಿರುವ ಹೇಳಿಕೆಗಳು ಯೋಜನೆಯ ಫಲಾನುಭವಿಗಳನ್ನು ಅಪಮಾನ ಮಾಡಿದಂತಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ಚುನಾವಣೆ ಮುಗಿದಮೇಲೆ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುವಾರ್ ಸೇರಿದಂತೆ ಕಾಂಗ್ರೆಸ್ ನಾಯಕರುಗಳ ರಕ್ತ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಮ್ಮ ಪಕ್ಷದ ನಾಯಕರು, ಮುಖಂಡರು, ಜಿಲ್ಲಾ ಮಟ್ಟದ ಪದಾಧಿಕಾರಿಗಳ ರಕ್ತದ ಪ್ರತಿಕಣಕಣದಲ್ಲೂ ಗ್ಯಾರಂಟಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಬದ್ಧತೆ ಇದೆ.
ನಮ್ಮ ದೇಹದಲ್ಲಿ ಒಂದು ಹನಿ ರಕ್ತ ಸಂಚಾರವಿರುವ ತನಕವೂ ನಾವು ಯೋಜನೆಗಳನ್ನು ನಿಲ್ಲಿಸಲು ಹೋಗುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಂವಿಧಾನ ಬದಲಾವಣೆ ಬಿಜೆಪಿ ಡಿಎನ್‌ಎಯಲ್ಲಿ ಇದೆ. ಇದರ ಜೊತೆಗೆ ದಲಿತ, ರೈತ, ಮಹಿಳಾ ವಿರೋಧಿ ಡಿಎನ್‌ಎ ಕೂಡ ಬಿಜೆಪಿ ಹೊಂದಿದೆ. ಅವರ ಪಕ್ಷದ ಅಭ್ಯರ್ಥಿಗಳು ಸಂವಿಧಾನ ಬದಲಾವಣೆ ಮಾಡುತೇವೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರೂ ಏಕೆ ಕ್ರಮ ಕೈಗೊಂಡಿಲ್ಲ. ಇದರಿಂದ ಅವರ ನಿಲುವು ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…