Mysore
18
scattered clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರದೇ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಶಾಸಕ ಜಿ ಟಿ ದೇವೇಗೌಡ ಹೇಳಿದರು.

ನಗರದ ಹೂಟಗಳ್ಳಿ ನಗರ ಸಭೆ ಆವರಣದಲ್ಲಿ ಸಮೃದ್ಧಿ ಟ್ರಸ್ಟ್ , ಅನ್ನಪೂರ್ಣ ಕಣ್ಣಿನ ಆಸ್ಪತ್ರೆ, ಎನ್ ಪಿ ಆಸ್ಪತ್ರೆ ಹಾಗೂ ಬಯೋ ಸ್ನೇಹಿ ರವರ ಸಹಯೋಗದೊಂದಿಗೆ ಪೌರ ಕಾರ್ಮಿಕರಿಗೆ ಉಚಿತ ಕಣ್ಣಿತ ತಪಾಸಣಾ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಡುತ್ತಿರುವ ಕಾರಣದಿಂದ ಇಂದು ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗುತ್ತಿದೆ. ಕೆಲಸದ ಒತ್ತಡ ದಲ್ಲಿ ಮಾಡುವ ಕೆಲವೊಂದು ನಿರ್ಲಕ್ಷ್ಯತನದಿಂದ ನಮ್ಮ ಆರೋಗ್ಯ ಹಾಳಾಗುತ್ತಿದೆ. ಪೌರಕಾರ್ಮಿಕರು ಆರೋಗ್ಯ ತಪಾಸಣೆ ಶಿಬಿರ ಗಳಿಗೆ ಸೀಮಿತವಾಗದೇ ನಿತ್ಯ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಹೇಳಿದರು.

ಪೌರಕಾರ್ಮಿಕರು ಆರೋಗ್ಯವಾಗಿದ್ದರೆ ಇಡೀ ನಗರ ಆರೋಗ್ಯ ವಾಗಿರುತ್ತದೆ. ಪೌರಕಾರ್ಮಿಕರು ಆರೋಗ್ಯವಂತರಾಗಿದ್ದರೆ ನಗರದ ಸ್ವಚ್ಛತೆಯನ್ನು ಕಾಪಾಡಿ ಎಲ್ಲರ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ಆದುದರಿಂದ ಅವರು ಇಂತಹ ಆರೋಗ್ಯ ಶಿಬಿರಗಳನ್ನು ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

ನಗರಸಭೆ ಆಯುಕ್ತರದ ಚಂದ್ರಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಗಿರಿಜಾ, ಸಮೃದ್ಧಿ ವಾರ್ತೆ ಪತ್ರಿಕೆಯ ಸಂಪಾದಕಿ ಸಹನಗೌಡ, ಒಂದು ಹೆಜ್ಜೆ ರಕ್ತದಾನಿಗಳ ಬಳಗದ ಅಧ್ಯಕ್ಷರಾದ  ಮಂಜು , ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ಎಂ.ಡಿ.ಅಶ್ವತ್ ಕುಮಾರ್, ಎನ್‌.ಪಿ ಆಸ್ಪತ್ರೆ ವಿರಪ್ಪ, ಹೆಲ್ತ್ ಇನ್ಸ್ಪೆಕ್ಟರ್ ಗಳಾದ ಶಂಕರ್ ಲಿಂಗೇಗೌಡರು, ಶಿವಪ್ರಸಾದ್, ನೇತ್ರಾವತಿ, ಪುಷ್ಪಲತಾ ಮತ್ತು ಬಯೋಸ್ನೇಹಿ ಮನು
ಹಾಗೂ ಇನ್ನಿತರರು ಹಾಜರಿದ್ದರು.

Tags:
error: Content is protected !!