ಮೈಸೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಂದೆ ಸಿದ್ದರಾಮಯ್ಯಗೆ ತಮ್ಮ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ಸ್ಪರ್ಧಿಸಿ ವರುಣದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಇದೀಗ ಪುತ್ರ ಯತೀಂದ್ರ ಅವರ ರಾಜಕೀಯ ನಡೆಯ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಇಂದು(ಮೇ.24) ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಹೈ ಕಮಾಂಡ್ ನವರು ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಹೋದ ಬಾರಿ ನಾನು ವರುಣಾದಲ್ಲಿಯೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. ಈಗ ಏನು ಮಾಡುತ್ತಾರೆ ಎನ್ನುವ ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿದಿಲ್ಲ ಎಂದರು.





