ಮೈಸೂರು

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು

ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸಯೀದುನ್ನಿಸಾ ಅವರು ಜೀವಾವಧಿ ಶಿಕ್ಷೆ ಹಾಗೂ ೧.೨೫ ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಮಳವಳ್ಳಿ ತಾಲ್ಲೂಕು ಧನಗೂರು ಗ್ರಾಮದ ಅಜ್ವಲ್ ಖಾನ್ (೩೯) ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ. ೨೦೦೬ರ ಜ.೨೧ರಂದು ಸಲ್ಮಾ ಬೇಗಂ ಎಂಬವರನ್ನು ಅಜ್ವಲ್ ಖಾನ್ ಮದುವೆಯಾಗಿದ್ದ. ಮೂರು ವರ್ಷ ಆಕೆಯ ಜತೆ ಸಂಸಾರ ನಡೆಸಿದ ಈತ ನಂತರದ ದಿನಗಳಲ್ಲಿ ಸಲ್ಮಾ ಬೇಗಂ ಶೀಲದ ಮೇಲೆ ಅನುಮಾನಪಟ್ಟು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದನು.

ಈ ಬಗ್ಗೆ ಸಲ್ಮಾ ಬೇಗಂ ತನ್ನ ತಂದೆ ಮತ್ತು ಸಹೋದರರಿಗೆ ತಿಳಿಸಲಾಗಿ, ಅವರು ಧೈರ್ಯ ಹೇಳಿ ಅನುಸರಿಸಿಕೊಂಡು ಜೀವನ ಮಾಡುವಂತೆ ಸಲಹೆ ನೀಡಿದ್ದರು. ಹೀಗಿದ್ದರೂ ಆರೋಪಿಯು ಆಗಾಗ್ಗೆ ಅಜಾಂ ಪಾಷ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ಶೀಲ ಶಂಕಿಸಿ,೨೦೨೩ರ ಮೇ ೮ರಂದು ಕೊಲೆ ಮಾಡಬೇಕೆಂದು ನಿರ್ಧರಿಸಿ ಬೆಳಿಗ್ಗೆ ೧೧ ಗಂಟೆ ಸಮಯದಲ್ಲಿ ಸಲ್ಮಾ ಬೇಗಂ ಮನೆಯಲ್ಲಿ ಒಬ್ಬರೇ ಇದ್ದಾಗ ತನ್ನ ಮಗನೊಂದಿಗೆ ಸೇರಿ ಕತ್ತು ಹಿಸುಕಿ ಉಸಿರುಗಟ್ಟಿಸಿ, ನಂತರ ತಲೆದಿಂಬನ್ನು ಮುಖದ ಮೇಲೆ ಅದುಮಿ ಕೊಲೆ ಮಾಡಿದ್ದನು.

ಈ ಸಂಬಂಧ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ,ಆರೋಪಿ ಅಜ್ವಲ್ ಖಾನ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ೨ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿಯು ತನ್ನ ಮಗನೊಂದಿಗೆ ಸೇರಿ ಪತ್ನಿಯನ್ನು ಕೊಲೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸಯೀದುನ್ನಿಸಾ ಅವರು ಆರೋಪಿ ಅಜ್ವಲ್ ಖಾನ್‌ಗೆ ಜೀವಾವಧಿ ಶಿಕ್ಷೆ, ೧ ಲಕ್ಷ ರೂ. ದಂಡ ಮತ್ತು ೨ ವರ್ಷಗಳ ಸಜೆ ಮತ್ತು ೨೫ ಸಾವಿರ ರೂ. ದಂಡ ವಿಧಿಸಿ ಶಿಕ್ಷೆಯ ತೀರ್ಪು ನೀಡಿದ್ದಾರೆ.

ಮೃತಳ ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡಲು ಆದೇಶಿಸಿದ್ದಾರೆ. ಅಭಿಯೋಜನೆಯ ಪರವಾಗಿ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ಕೆ.ನಾಗರಾಜು ವಾದ ಮಂಡಿಸಿದ್ದರು

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago