ಮೈಸೂರು: ಮುಡಾದ ಪ್ರಕರಣ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮಧ್ಯೆಯೇ ಶಾಸಕ ಜಿ.ಟಿ.ದೇವೇಗೌಡರ ಸಂಬಂಧಿ ಮಹೇಂದ್ರ ಮುಡಾದಿಂದ 19 ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರಿದ್ದಾರೆ.
ನಗರದಲ್ಲಿ ಇಂದು (ನ.16) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಿ.ಟಿ.ದೇವೇಗೌಡ ಅವರ ಸಹೋದರಿಯ ಮಗ ಮಹೇಂದ್ರ ಮುಡಾದಿಂದ 19 ನಿವೇಶನಗಳನ್ನು ಪಡೆದಿದ್ದಾರೆ. ಜಿಟಿ ದೇವೇಗೌಡರೇ ಈ ನಿವೇಶನಗಳನ್ನ ಅಕ್ರಮವಾಗಿ ನಿವೇಶನ ಕೊಡಿಸಿದ್ದಾರೆ. ಈ ನಿವೇಶನಗಳನ್ನು ಮುಡಾ ಯಾವಾಗ ವಶಪಡಿಸಿಕೊಂಡಿದೆ ಎಂಬ ಬಗ್ಗೆ ಮಾಹಿತಿ ನಿಖರವಾಗಿಲ್ಲ. ಈ ಭೂಮಿಯ ಮಾಲೀಕ ಮಹೇಂದ್ರ ಅಲ್ಲ ಎಂದು ಹೇಳಿದರು.
ಮಹೇಂದ್ರ ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ಅಕ್ರಮವಾಗಿ ಈ ಭೂಮಿಯನ್ನು ಪರಿಹಾರದ ಮೂಲಕ ಪಡೆದಿದ್ದಾರೆ. ನಿಜವಾಗಿಯೂ ಹೇಳಬೇಕೆಂದರೆ ಆ ವ್ಯಕ್ತಿಗೆ ದೇವನೂರು ಬಡಾವಣೆ ಸ್ಥಳದಲ್ಲಿ ಭೂಮಿಯೇ ಇಲ್ಲ. ಹೀಗಿರುವಾಗ ವಿಜಯನಗರದ 3ನೇ ಹಂತದ ಬಡಾವಣೆಯಲ್ಲಿ 19 ನಿವೇಶನಗಳನ್ನು ಹಂಚಿಕೆ ಮಾಡಿರುವುದಕ್ಕೆ ಮಾನದಂಡಗಳೇನು ಎಂದು ಪ್ರಶ್ನಿಸಿದ್ದಾರೆ.
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…