ಮೈಸೂರು : ಮೂರು ದಶಕಗಳಿಂದ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ನನಗೆ ಸಿಗಬೇಕಾದ ಮಾನ್ಯತೆ ಗೌರವ ನಾನಿದ್ದ ಪಕ್ಷದಿಂದ ಸಿಗಲಿಲ್ಲ ಎಂದು ಹೆಚ್.ವಿ.ರಾಜೀವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಸುಮಾರು ಮೂರು ದಶಕಗಳಿಂದ ಸಮಾಜದಲ್ಲಿ ನಿರಂತರವಾಗಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಬಂದ ನನಗೆ ನೀಡಬೇಕಾದ ಗೌರವ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪರಿಸರ, ಸ್ವಚ್ಛ ಭಾರತ, ಸಾಮಾಜಿಕ ಕ್ಷೇತ್ರದ ಕೆಲಸ, ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರ ಹಾಗೂ ರಾಜಕೀಯ ಸಂಘಟನೆಯ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇನೆ.
ಆದರೆ, ಇಷ್ಟೆಲ್ಲಾ ಕೆಲಸ ಮಾಡಿದರೂ ನಾನಿದ್ದ ಪಕ್ಷ ನನಗೆ ನೀಡಬೇಕಾದ ಗೌರವ ನೀಡಲಿಲ್ಲ ಎಂಬ ನೋವು ನನಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನುಡಿದಂತೆ ನಡೆವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ : ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾಧನ, ನೆಮ್ಮದಿಯಿಂದ ಬದುಕುವ ಯೋಜನೆ ನೀಡುವುದು ಸರ್ಕಾರದ ಕೆಲಸ. ತವರು ಜಿಲ್ಲೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೆಲ್ಲ ಘೋಷಣೆ ಮಾಡಿದ್ದರೋ ಅದನ್ನೆಲ್ಲಾ ಮಾಡಿದ್ದಾರೆ ಎಂದು ಹೆಚ್.ವಿ.ರಾಜೀವ್ ತಿಳಿಸಿದರು.
ನುಡಿದಂತೆ ನಡೆವ, ಹೇಳಿದಂತೆ ನಡೆವ ಏಕಮೇವ ಮುಖ್ಯಮಂತ್ರಿ ಎಂದರೆ ಅದುಉ ಸಿದ್ದರಾಮಯ್ಯ ಅವರಲ್ಲಿ ನೀಡಲು ಸಾಧ್ಯವಾಯಿತು ಎಂದರು.
ಕಾಂಗ್ರೆಸ್ ಸೇರಲು ಪಂಚ ಗ್ಯಾರೆಂಟಿ ಕಾರಣ: ಕಟ್ಟಕಡೆಯ ಬಡವ ತನ್ನ ಮನೆಯಲ್ಲಿ ನೆಮ್ಮದಿಯಿಂದ ಊಟ ಮಾಡಿ, ಆತಂಕ ಇಲ್ಲದ ಬದುಕಾಗಬೇಕು ಎಂಬ ಚಿಂತನೆ ಮತ್ತು ಯೋಜನೆ ಬಗ್ಗೆ ಹೇಳಿದ್ದಾಗ ಎಲ್ಲರೂ ಟೀಕೆ ಮಾಡಿದ್ದರು.
ಆದರೆ ಸಿದ್ದರಾಮಯ್ಯ ಅವರು ಅದನ್ನೇಲ್ಲಾ ಬದಿಗಿಟ್ಟು ಎಲ್ಲಾ ಐದು ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ರೀತಿ ನನ್ನ ಹೃದಯಕ್ಕೆ ಮುಟ್ಟಿ, ಬಡವರ ಧ್ವನಿಯಗಿರುವಂತ ಪಕ್ಷ ಹಾಗೂ ಸರ್ಕಾರದಲ್ಲಿ ನನ್ನ ಸೇವೆ ಮಾಡಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಸೇರಿದ್ದೇನೆ ಎಂದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…