Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೇ ಮೂಲ ಸೌಕರ್ಯ ಮರೀಚಿಕೆ: ನಿವಾಸಿಗಳ ಪರದಾಟ

ಟಿ.ನರಸೀಪುರ: ಇಲ್ಲಿನ ವಾರ್ಡ್‌ ನಂಬರ್.‌12ರ ನಿವಾಸಿಗಳು ರಸ್ತೆ, ಒಳಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೇ ನಿವಾಸಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಟಿ.ನರಸೀಪುರ ವಾರ್ಡ್ ನಂಬರ್.12ರ ಜನರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ. ಹೆಸರಿಗಷ್ಟೇ ಇವರು ಪಟ್ಟಣ ಪ್ರದೇಶದ ನಿವಾಸಿಗಳು. ಆದರೆ ಮೂಲಭೂತ ಸೌಕರ್ಯವಿಲ್ಲದೇ ಇವರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ, ಒಳಚರಂಡಿ, ಕುಡಿಯುವ ನೀರು, ಸ್ವಚ್ಚತೆ ಇದೆಲ್ಲವೂ ಕೇವಲ ಮರೀಚಿಕೆಯಾಗಿಯೇ ಉಳಿದಿದ್ದು, ರಸ್ತೆಯ ಮಧ್ಯದಲ್ಲೇ ಒಳಚರಂಡಿ ನೀರು ನಿಂತು ಗಬ್ಬೆದ್ದು ನಾರುತ್ತಿದೆ. ರಸ್ತೆಯ ಅಕ್ಕ ಪಕ್ಕದಲ್ಲೇ ಗಿಡಗಂಟಿಗಳು ಬೇಲಿಯಂತೆ ಬೆಳೆದು ನಿಂತಿದ್ದು, ರಾತ್ರಿಯಾದರೆ ಸಾಕು ಸೊಳ್ಳೆಕಾಟ ಜಾಸ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಈ ಎಲ್ಲಾ ಸಮಸ್ಯೆಗಳ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ಯಾರೆ ಎನ್ನದೇ ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಇಲ್ಲಿಯವರೆಗೂ ತಾಳ್ಮೆಯಿಂದ ಮೂಲ ಸೌಕರ್ಯಕ್ಕೆ ಮನವಿ ಮಾಡಿದ್ದೇವೆ. ಶೀಘ್ರದಲ್ಲಿ ಸೌಲಭ್ಯ ಒದಗಿಸದಿದ್ರೆ ಪುರಸಭೆ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 

Tags:
error: Content is protected !!