ಟಿ.ನರಸೀಪುರ: ಇಲ್ಲಿನ ವಾರ್ಡ್ ನಂಬರ್.12ರ ನಿವಾಸಿಗಳು ರಸ್ತೆ, ಒಳಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೇ ನಿವಾಸಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಟಿ.ನರಸೀಪುರ ವಾರ್ಡ್ ನಂಬರ್.12ರ ಜನರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ. ಹೆಸರಿಗಷ್ಟೇ ಇವರು ಪಟ್ಟಣ ಪ್ರದೇಶದ ನಿವಾಸಿಗಳು. ಆದರೆ ಮೂಲಭೂತ ಸೌಕರ್ಯವಿಲ್ಲದೇ ಇವರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ರಸ್ತೆ, ಒಳಚರಂಡಿ, ಕುಡಿಯುವ ನೀರು, ಸ್ವಚ್ಚತೆ ಇದೆಲ್ಲವೂ ಕೇವಲ ಮರೀಚಿಕೆಯಾಗಿಯೇ ಉಳಿದಿದ್ದು, ರಸ್ತೆಯ ಮಧ್ಯದಲ್ಲೇ ಒಳಚರಂಡಿ ನೀರು ನಿಂತು ಗಬ್ಬೆದ್ದು ನಾರುತ್ತಿದೆ. ರಸ್ತೆಯ ಅಕ್ಕ ಪಕ್ಕದಲ್ಲೇ ಗಿಡಗಂಟಿಗಳು ಬೇಲಿಯಂತೆ ಬೆಳೆದು ನಿಂತಿದ್ದು, ರಾತ್ರಿಯಾದರೆ ಸಾಕು ಸೊಳ್ಳೆಕಾಟ ಜಾಸ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ಈ ಎಲ್ಲಾ ಸಮಸ್ಯೆಗಳ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ಯಾರೆ ಎನ್ನದೇ ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಇಲ್ಲಿಯವರೆಗೂ ತಾಳ್ಮೆಯಿಂದ ಮೂಲ ಸೌಕರ್ಯಕ್ಕೆ ಮನವಿ ಮಾಡಿದ್ದೇವೆ. ಶೀಘ್ರದಲ್ಲಿ ಸೌಲಭ್ಯ ಒದಗಿಸದಿದ್ರೆ ಪುರಸಭೆ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಜಾರ್ಖಂಡ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…