ಮೈಸೂರು

ರಸ್ತೆಯಲ್ಲಿ ನಿಲ್ಲದ ಪುಂಡರ ಹಾವಳಿ: ಸ್ಟಂಟ್ಸ್‌ ಮಾಡುತ್ತಿದ್ದ ಯುವಕನನ್ನು ಬಂಧಿಸಿದ ಪೊಲೀಸರು

ಮೈಸೂರು: ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಜನರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್‌ನಲ್ಲಿ ಅಪಾಯಕಾರಿ ಸ್ಟಂಟ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನನ್ನು ಇಲವಾಲ ಪೊಲೀಸ್‌ ಠಾಣೆಯ ಪಿಎಸ್‌ಐ ಬಿ.ಆರ್.ಮಹೇಶ್‌ ಕುಮಾರ್‌ ಅವರು ಬಂಧಿಸಿದ್ದಾರೆ.

ಪೊಲೀಸರು ಬಂಧಿಸಿದ ಯುವಕನನ್ನು ಮೈಸೂರಿನ ಮೇಟಗಳ್ಳಿಯ ಬಡಾವಣೆಯ ಏಕಲವ್ಯ ನಿವಾಸಿ ಪ್ರಜ್ವಲ್‌(22) ಎಂದು ಗುರುತಿಸಲಾಗಿದೆ. ಈತನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನು ಅಪ್ ಲೋಡ್ ಮಾಡುವ ಖಾತೆಗಳ ಮೇಲೆ ನಿಗಾ ಇಡುವ ಜವಾಬ್ದಾರಿ ಹೊತ್ತ ಪೊಲೀಸ್ ಸಿಬ್ಬಂದಿ ಅಭಿಷೇಕ್ ಅವರು, ಪ್ರಜ್ವಲ್‌ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್‌ ಮಾಡಿರುವ ಫೋಟೋಗಳನ್ನು ಪತ್ತೆ ಹಚ್ಚಿದ್ದರು. ಈ ಘಟನೆ ಇಲವಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಠಾಣೆಯ ಪಿಎಸ್‌ಐ ಅಧಿಕಾರಿಯ ಗಮನಕ್ಕೆ ತಂದಿದ್ದರು.

ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸ್‌ ಅಧಿಕಾರಿಗಳು ಪೊಲೀಸರು, ಹೋಂಡಾ ಡಿಯೋ ವಾಹನ ನೋಂದಣಿ ಸಂಖ್ಯೆ KA-12 S5574 ಅನ್ನು ವಶಕ್ಕೆ ಪಡೆದು, ಮುಖ್ಯ ರಸ್ತೆಯಲ್ಲಿ ವ್ಹೀಲಿಂಗ್‌ ಮಾಡುತ್ತಾ ಅಪಾಯಕಾರಿ ಸ್ಟಂಟ್ಸ್‌ ಮಾಡುತ್ತಿದ್ದ ಪ್ರಜ್ವಲ್‌ನನ್ನು ಬಂಧಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago