ಮೈಸೂರು : ನಾಡಹಬ್ಬ ಮೈಸೂರು ದಸರಾ ಬಂದ್ರೆ ಸಾಕು ಅಧಿಕಾರಿಗಳು ಮೈಸೂರಿನಲ್ಲಿ ಗುಂಡಿಬಿದ್ದ ಎಲ್ಲಾ ರಸ್ತೆಗಳಿಗೆ ಡಾಂಬಾರು ಹಾಕಿ ಅದನ್ನ ಮುಚ್ಚಿವ ಕೆಲಸಕ್ಕೆ ಮುಂದಾಗುತ್ತಿದ್ದರು. ಆದರೆ ಅಧಿಕಾರಿಗಳು ಈ ವರ್ಷ ದಸರಾಗೂ ಮುನ್ನವೇ ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಗುಂಡಿಬಿದ್ದ ರಸ್ತೆಗಳನ್ನ ಮುಚ್ಚಿವ ಕೆಲಸಕ್ಕೆ ಮುಂದಾಗಿದ್ದಾರೆ.
ನಗರದ ಪ್ರತಿ ವಾರ್ಡ್ ಗಳಲ್ಲಿರುವ ಗುಂಡಿಬಿದ್ದ ರಸ್ತೆಗಳ ಬಗ್ಗೆ ಪಾಲಿಕೆಯ ಅಧಿಕಾರಿಗಳು ಸಮೀಕ್ಷೆ ಮಾಡಿದ್ದು, ಅಂದಾಜು ೩೦ ರಿಂದ ೪೦ ಗುಂಡಿಗಳನ್ನ ಪತ್ತೆಹಚ್ಚಿದ್ದಾರೆ. ಪಾಲಿಕೆಯ ೯ ವಲಯಗಳಿಂದ ೩೫೦ಕ್ಕೂ ಹೆಚ್ಚು ಗುಂಡಿಗಳಿಗೆ ಎಂದು ಎಂಜಿನಿಯರ್ ಗಳು ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.
ಇನ್ನು ಮಹಾನಗರ ಪಾಲಿಕೆಯ ಸಾಮಾನ್ಯ ಅನುದಾನದ ಅಡಿ ಗುಂಡಿ ಮುಚ್ಚುವುದು ಸೇರಿ ರಸ್ತೆ ಡಾಂಬರೀಕರಣಕ್ಕೆ ವಲಯವಾರು ೧೦ ಲಕ್ಷ ರೂಪಾಯಿಯಂತೆ ೯ ವಲಯಗಳಿಗೆ ಕಾಮಗಾರಿ ನಡೆಸಲು ೯೦ ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ.
ಇನ್ನು ನಗರದಲ್ಲಿ ಮಳೆ ನಿಂತಿರುವುದರಿಂದ ವೈಜ್ಞಾನಿಕ ರೀತಿಯಲ್ಲಿ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದ್ದು, ಆಯಾ ಎಲ್ಲಾ ವಲಯಾಧಿಕಾರಿಗಳು ಮತ್ತು ಎಂಜಿನಿಯರ್ ಗಳು ಗುರುತಿಸುವ ರಸ್ತೆಯಲ್ಲಿ ಗುತ್ತಿಗೆದಾರರು ಕೆಲಸ ನಿರ್ವಹಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…