ಮೈಸೂರು

ಮಹನೀಯರ ತತ್ವ, ಆದರ್ಶ ಸಿದ್ದಾಂತಗಳು ಜನರಿಗೆ ತಲುಪಬೇಕು: ಆರ್ ಲೋಕನಾಥ್

ಮೈಸೂರು : ಜಯಂತಿಗಳನ್ನು ಆಚರಣೆ ಮಾಡುವುದು ಮಹನೀಯರ ತತ್ವ ಆದರ್ಶ ಸಿದ್ಧಾಂತಗಳನ್ನು ಜನರಿಗೆ ತಲುಪಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್ ಲೋಕನಾಥ್ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ವರ್ಷ ಮಹಾಯೋಗಿ ವೇಮನ ಜಯಂತಿ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಒಟ್ಟಿಗೆ ಆಚರಣೆ ಆಯ್ಕೆ ಮಾಡಲಾಗಿತ್ತು. ಇದರಿಂದ ಸಂಪನ್ಮೂಲ ಕ್ರೂಡೀಕರಣ ಮಾಡಿ, ಹೆಚ್ಚಿನ ಜನರು ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯವಾಗುತ್ತದೆ ಸಲಹೆ ನೀಡಿದರು.

ಪ್ರತಿ ಜಯಂತಿ ಆಚರಣೆಗೆ ಸರ್ಕಾರದ ವತಿಯಿಂದ 50 ಸಾವಿರ ಅನುದಾನ ನೀಡಲಾಗುತ್ತದೆ. ಸಮಿತಿಯ ನಿರ್ಧಾರದಂತೆ ಮಹಾಯೋಗಿ ವೇಮನ ಜಯಂತಿ ಹಾಗೂ ವೇಮನ ಜಯಂತಿಯನ್ನು ಒಟ್ಟಿಗೆ ಜನವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಆಚರಣೆ ಮಾಡಲು ತೀರ್ಮಾನಿಸಲಾಯಿತು.

ಜಯಂತಿಯಲ್ಲಿ ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಅವರ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ನೀಡಲಾಗುವುದು ಎಂದು ತಿಳಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗೀತಾ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುವುದು. ಜಯಂತಿ ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಕುಡಿಯುವ ನೀರನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಾಡಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸುದರ್ಶನ್ ಅವರು ಮಾತನಾಡಿ ಒಂದೊಂದು ಜಯಂತಿಗೆ ತಲಾ 50 ಸಾವಿರ ಅನುಧಾನ ಇದೆ. ಎರಡು ಜಯಂತಿಗಳನ್ನು ಒಟ್ಟಿಗೆ ಸೇರಿ ಆಚರಣೆ ಮಾಡಿದರೆ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುತ್ತದೆ. ಒಟ್ಟಿಗೆ ಆಚರಣೆ ಮಾಡಿದರೆ ಲಘು ಉಪಹಾರ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತದೆ. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಲಾಗುವುದು ಎಂದರು.

ಸಮುದಾಯದ ಮುಖಂಡರು ಮಾತನಾಡಿ ಜಯಂತಿಗಳು ಜಾತಿಗಳಿಗೆ ಸೀಮಿತವಾಗಬಾರದು. ಜನ ಪ್ರತಿನಿಧಿಗಳು ಜಯಂತಿಗಳ ಆಚರಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಸಮುದಾಯಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

51 mins ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

5 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

5 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

5 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

5 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

5 hours ago