ಮೈಸೂರು : ಚಾಲಕನ ಅರಿವಿಗೆ ಬಾರದೇ ಬಾಲಕಿ ಮೇಲೆ ಶಾಲಾ ಬಸ್ ಹಾದು ಹೋದ ಘಟನೆ ಜಿಲ್ಲೆಯ ಹುಣಸೂರು ಪಟ್ಟಣದ ಮಂಜುನಾಥ ನಗರದಲ್ಲಿ ನಡೆದಿದೆ. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ.
ಹುಣಸೂರು ಪಟ್ಟಣದ ಮಂಜುನಾಥ ನಗರದ ನಿವಾಸಿಯಾಗಿರುವ ಬಾಲಕಿ ಬಸ್ ಇಳಿದು, ವಾಹನದ ಮುಂಭಾಗದಿಂದ ರಸ್ತೆ ದಾಟಿ ಮನೆಗೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಬಸ್ ಮುಂದೆ ಚಲಿಸಿದೆ. ಬಾಲಕಿಯನ್ನು ಗಮನಿಸದ ಚಾಲಕ ಬಸ್ ಚಲಾಯಿಸಿದ್ದಾನೆ. ಬಸ್ ಬಾಲಕಿಯ ಮೈಮೇಲೆ ಹಾದು ಹೋಗಿದೆ.
ಇದಾದ ನಂತರ ಘಟನೆ ತಿಳಿದ ಚಾಲಕ ತಕ್ಷಣ ಬಸ್ ನಿಲ್ಲಿಸಿ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಆಕೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರು ಚಾಲಕನ ವಿರುದ್ಧ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…