ಸರಗೂರು: ದುಷ್ಕರ್ಮಿಗಳು ನಿಧಿ ಆಸೆಗಾಗಿ ದೇವರ ವಿಗ್ರಹಗಳನ್ನು ಕಿತ್ತು ಹಾಕಿ ಭಗ್ನಗೊಳಿಸಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ನೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ: ಮಂಡ್ಯ: ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್‌ಮೇಲ್
ಘಟನೆ ಬೆಳಕಿಗೆ ಬರುತ್ತಿದ್ದಂತೆ ನೂರಾರು ಗ್ರಾಮಸ್ಥರು ದೇವರಗುಡಿ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ದೇವರ ಪವಿತ್ರ ಸ್ಥಳದಲ್ಲಿ ಈ ರೀತಿಯ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.





