ಮೈಸೂರು

ಸಮಾಜದಲ್ಲಿ ವಿಷ ಬಿತ್ತುವ ಕೆಲಸವನ್ನು ಸೂಲಿಬೆಲೆ ಮಾಡುತ್ತಿದ್ದಾರೆ: ಮಧು ಬಂಗಾರಪ್ಪ ಕಿಡಿ!

ಮೈಸೂರು: ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮದ್ಯಾಹ್ನಕ್ಕೆ ನಿಗದಿಪಡಿಸಿರುವ ಬಗ್ಗೆ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ನಮಾಜ್‌ಗಾಗಿ ವೇಳೆ ಬದಲಾಯಿಸಲಾಗಿದೆಯೇ ಎಂದು ಟ್ವೀಟ್‌ ಮಾಡಿದ್ದನ್ನು ಉಲ್ಲೇಖಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಕ್ರವರ್ತಿ ಸೂಲಿಬೆಲೆ ಅವನೊಬ್ಬ ತಲೆಹರಟೆ, ಅವನಿಗೆ ಮಾನ ಮರ್ಯಾದೆ ಇದಿಯಾ? ಸಮಾಜದಲ್ಲಿ ವಿಷ ಬಿತ್ತುವ ಕೆಲಸವನ್ನು ಸೂಲಿಬೆಲೆ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡಸಿದ್ದಾರೆ.

ನಗರದಲ್ಲಿಂದು ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿಯ ಎಲ್ಲ ಪರೀಕ್ಷೆಗಳು ಬೆಳಗಿನ ಸೆಷನ್ ನಲ್ಲಿ ನಡೆಸಲಾಗುತ್ತಿದೆ ಅದರೆ, ಮಾರ್ಚ್ ಒಂದರಂದು ಮಾತ್ರ ಒಂದು ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಅವತ್ತು ಶುಕ್ರವಾರ ಆಗಿರುವುದರಿಂದ ನಮಾಜಿಗೋಸ್ಕರ ವೇಳೆ ಬದಲಾಯಿಸಲಾಗಿದೆಯೇ ಅಂತ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ. ಇದರಿಂದಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಏಕವಚನದಲ್ಲೇ ಛಾಡಿಸಿದರು.

ಕನಿಷ್ಟ ಸಾಮಾನ್ಯ ಜ್ಞಾನವನ್ನಾದರೂ ಆವರು ಪ್ರದರ್ಶಿಸಬೇಕಿತ್ತು, ಅವತ್ತು ಯಾಕೆ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ ಅಂತ ಯೋಚಿಸುವ ವ್ಯವಧಾನವೂ ಅವರಿಗಿಲ್ಲ, ಅಸಲು ವಿಷಯವೇನೆಂದರೆ ಅದೇ ದಿನ ದ್ವಿತೀಯ ಪರೀಕ್ಷೆಗಳು ಆರಂಭವಾಗಲಿದ್ದು, ಬೆಳಗ್ಗೆ ಆ ಪರೀಕ್ಷೆ ನಡೆಯಲಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಬಿಜೆಪಿ ನಾಯಕರು ಚುನಾವಣೆ ಸಮಯದಲ್ಲಿ ರಾಜ್ಯದಲ್ಲಿ ಈ ರೀತಿಯ ಭಾವನಾತ್ಮಕ ವಿಷಯಗಳಿಂದ ಜನರ ತಲೆಕೆಡಿಸುವುದನ್ನು ನಿಲ್ಲಿಸಬೇಕು, ಕರ್ನಾಟಕದಲ್ಲಿ ಅದೆಲ್ಲ ನಡೆಯಲ್ಲ. ರಾಜ್ಯದಲ್ಲಿ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ರಾಜಕೀಯ ನಡೆಸಿದರೇ ಜನರು ಇನ್ನೂ ಹೆಚ್ಚಿನ ಶಿಕ್ಷೆ ನೀಡುತ್ತಾರೆ ಎಂದು ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.

andolanait

Recent Posts

ಉಪ ಚುನಾವಣೆ: ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ: ಆರ್.‌ ಅಶೋಕ್

ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ,…

3 mins ago

ಮೈಸೂರಿನ ಸರಸ್ವತಿ ಚಿತ್ರಮಂದಿರ ಇನ್ನು ನೆನಪು ಮಾತ್ರ: ಕಟ್ಟಡ ನೆಲಸಮ

ಮೈಸೂರು: ನಾಲ್ಕು ದಶಕಕ್ಕೂ ಹೆಚ್ಚು ಕಾಲ ಜನರನ್ನು ರಂಜಿಸಿದ್ದ ನಗರದ ಸರಸ್ವತಿ ಚಿತ್ರಮಂದಿರ ನೆನಪಿನಂಗಳಕ್ಕೆ ಸರಿಯುತ್ತಿದೆ. ಪ್ರೇಕ್ಷಕರ ಕೊರತೆಯಿಂದ ಕೋವಿಡ್‌…

17 mins ago

ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಿರುಗೇಟು ಕೊಟ್ಟ ನಿಖಿಲ್ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಅನೇಕ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.…

3 hours ago

ರಂಗೇರಿದ ಜಾರ್ಖಂಡ್ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಇಂದು…

3 hours ago

ರಂಗೇರಿದ ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಪರ ಬಿಜೆಪಿ ನಾಯಕರ ಪ್ರಚಾರ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಕೇಂದ್ರ…

3 hours ago

ಯುಪಿ ಸಿಎಂ ಯೋಗಿ ಆದಿತ್ಯನಾಥ್ಗೆ ಬೆದರಿಕೆ ಹಾಕಿದ್ದ ಮಹಿಳೆ ಬಂಧನ

ಮುಂಬೈ: ಇನ್ನು 10 ದಿನದೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಹತ್ಯೆ ಮಾಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ…

4 hours ago