ಮೈಸೂರು: ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮದ್ಯಾಹ್ನಕ್ಕೆ ನಿಗದಿಪಡಿಸಿರುವ ಬಗ್ಗೆ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ನಮಾಜ್‌ಗಾಗಿ ವೇಳೆ ಬದಲಾಯಿಸಲಾಗಿದೆಯೇ ಎಂದು ಟ್ವೀಟ್ ಮಾಡಿದ್ದನ್ನು ಉಲ್ಲೇಖಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಕ್ರವರ್ತಿ ಸೂಲಿಬೆಲೆ ಅವನೊಬ್ಬ ತಲೆಹರಟೆ, ಅವನಿಗೆ ಮಾನ ಮರ್ಯಾದೆ ಇದಿಯಾ? ಸಮಾಜದಲ್ಲಿ ವಿಷ ಬಿತ್ತುವ ಕೆಲಸವನ್ನು ಸೂಲಿಬೆಲೆ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡಸಿದ್ದಾರೆ.
ನಗರದಲ್ಲಿಂದು ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿಯ ಎಲ್ಲ ಪರೀಕ್ಷೆಗಳು ಬೆಳಗಿನ ಸೆಷನ್ ನಲ್ಲಿ ನಡೆಸಲಾಗುತ್ತಿದೆ ಅದರೆ, ಮಾರ್ಚ್ ಒಂದರಂದು ಮಾತ್ರ ಒಂದು ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಅವತ್ತು ಶುಕ್ರವಾರ ಆಗಿರುವುದರಿಂದ ನಮಾಜಿಗೋಸ್ಕರ ವೇಳೆ ಬದಲಾಯಿಸಲಾಗಿದೆಯೇ ಅಂತ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ. ಇದರಿಂದಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಏಕವಚನದಲ್ಲೇ ಛಾಡಿಸಿದರು.
ಕನಿಷ್ಟ ಸಾಮಾನ್ಯ ಜ್ಞಾನವನ್ನಾದರೂ ಆವರು ಪ್ರದರ್ಶಿಸಬೇಕಿತ್ತು, ಅವತ್ತು ಯಾಕೆ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ ಅಂತ ಯೋಚಿಸುವ ವ್ಯವಧಾನವೂ ಅವರಿಗಿಲ್ಲ, ಅಸಲು ವಿಷಯವೇನೆಂದರೆ ಅದೇ ದಿನ ದ್ವಿತೀಯ ಪರೀಕ್ಷೆಗಳು ಆರಂಭವಾಗಲಿದ್ದು, ಬೆಳಗ್ಗೆ ಆ ಪರೀಕ್ಷೆ ನಡೆಯಲಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.
ಬಿಜೆಪಿ ನಾಯಕರು ಚುನಾವಣೆ ಸಮಯದಲ್ಲಿ ರಾಜ್ಯದಲ್ಲಿ ಈ ರೀತಿಯ ಭಾವನಾತ್ಮಕ ವಿಷಯಗಳಿಂದ ಜನರ ತಲೆಕೆಡಿಸುವುದನ್ನು ನಿಲ್ಲಿಸಬೇಕು, ಕರ್ನಾಟಕದಲ್ಲಿ ಅದೆಲ್ಲ ನಡೆಯಲ್ಲ. ರಾಜ್ಯದಲ್ಲಿ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ರಾಜಕೀಯ ನಡೆಸಿದರೇ ಜನರು ಇನ್ನೂ ಹೆಚ್ಚಿನ ಶಿಕ್ಷೆ ನೀಡುತ್ತಾರೆ ಎಂದು ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…