ಮೈಸೂರು

ದೇಶ ಕಟ್ಟುವ ಯುವಕರಿಗೆ ಒಳ್ಳೆ ಪ್ರಾಧ್ಯಾಪಕರು ಸಿಗುತ್ತಿಲ್ಲ : ಕುಲಪತಿ ಪ್ರೊ.ಸಿ.ಎಂ ತ್ಯಾಗರಾಜು ಬೇಸರ

ಮೈಸೂರು: ಇಂದಿನ ದಿನಮಾನದಲ್ಲಿ ಓದಿ ವಿದ್ಯಾವಂತರಾಗಿ ದೇಶ ಕಟ್ಟಲು ಮುಂದಾಗುವ ವಿದ್ಯಾರ್ಥಿಗಳಿಗೆ ಒಳ್ಳೆಯ ಪ್ರಧ್ಯಾಪಕರು ಸಿಗುತ್ತಿಲ್ಲವೆಂದು ರಾಣಿಚೆನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ  ಆಯೋಜಿಸಿದ್ದ ಯುಜಿಸಿ ನೆಟ್‌ ಮತ್ತು ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ 45 ದಿನಗಳ ಶಿಬಿರದ ಉದ್ಘಾಟನೆಯನ್ನು ಶನಿವಾರ ನೇರವೇರಿಸಿ ಮಾತನಾಡಿದರು.

ಇಂದಿನ ಅಧ್ಯಾಪಕರಲ್ಲಿ ಶಿಕ್ಷಣದ ಗುಣಮಟ್ಟ ಕಡಿಮೆಯಾಗಿರುವುದು ಆತಂಕಕಾರಿ ಬೆಳವಣಿಗೆ. ಅಧ್ಯಾಪಕರೆ ಗುಣಮಟ್ಟ ಕಳೆದುಕೊಂಡರೆ ದೇಶದ ಯುವಕರ ಪರಿಸ್ಥಿತಿ ಏನಾಗಬಹುದು. ದೇಶದ ಯುವಕರು ಕಷ್ಟದ ಪರಿಸ್ಥಿತಿ ದಾಟುತ್ತಿದ್ದಾರೆ. ಎಲ್ಲರೂ ಪದವಿ ಪಡೆದಿದ್ದಾರೆ ಆದರೆ, ಕೆಲಸ ಇಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಗುರಿಮುಟ್ಟುವವರೆಗೆ ನಿಲ್ಲದಿರಿ. ತಮ್ಮ ಬದುಕಿನಲ್ಲಿ ಉನ್ನತ ಸಾಧನೆಗಳನ್ನು ಮಾಡುವ ಗುರಿಗಳನ್ನು ಹೊಂದಬೇಕು ಹಾಗೂ ಆ ಗುರಿ ಸಾಧನೆಯ ಹಾದಿಯಲ್ಲಿ ಯಾವುದೇ ಅಡೆ ತಡೆಗಳು ಬಂದರೂ ಎದೆಗುಂದದೇ, ತಮ್ಮ ನಿರೀಕ್ಷಿತ ಗುರಿ ತಲುಪುವವರೆಗೂ ಪ್ರಯತ್ನ ಮುಂದುವರೆಸಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳ ಅರಿವನ್ನು ವಿಸ್ತಾರ ಮಾಡುವವನೇ ಗುರು. ಆ ಗುರುವಿನ ಸ್ಥಾನ ತುಂಬುವ ಅಧ್ಯಾಪಕನು ನಿಷ್ಠೆಯಿಂದ ಪ್ರಾಮಾಣಿಕವಾಗಿರಬೇಕು. ಓದಿ ಯುವಕರೇ ಓದಿ ನಿಮ್ಮ ಜ್ಞಾನ ವಿಸ್ತಾರಕ್ಕಾಗಿ ಓದಿ, ನಿಮ್ಮ ಕನಸು ನನಸಾಗಲು ಓದಿ. ಓದು ಎಂಬುದು ನಿರಂತರವಾಗಿರಬೇಕು ಎಂದರು.

ದೇಶ ಕಟ್ಟುವ ಯುವಕರಿಗೆ ಒಳ್ಳೆಯ ಪ್ರಾಧ್ಯಾಪಕರು ಸಿಗದೆ ನೊಂದಿದ್ದಾರೆ. ಇಂದಿನ ಶಿಕ್ಷಣ ವ್ಯವಸ್ಥೆ ಏಕೀ ಸುಲ್ತಾನ್‌ ಎಂಬಾಂತಾಗಿದೆ. ನೂರಾರು ವಿದ್ಯಾರ್ಥಿಗಳನ್ನು ಕೋಣೆಯೊಳಗೆ ಕೂಡಾಕಿಕೊಂಡು ಅವರ ಅಭಿರುಚಿಗೆ ಮನ್ನಣೆ ಇಲ್ಲದಾಗಿದೆ. ನಿವೆಲ್ಲರೂ ಮುಂದೆ ಅತ್ಯುನ್ನತ ಪ್ರಾಧ್ಯಾಪಕರಾಗಿ ಸಮಾಜಮುಖಿ ಕೆಲಸಗಳನ್ನ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರಾಧ್ಯಾಪಕರು ಅಧ್ಯಪನ ಕುಶಲರಾಗಿರಬೇಕು, ಹೃದಯಸ್ಪರ್ಶಿಯಾಗಿರಬೇಕು. ಉದಾತ್ತ ಧ್ಯೇಯ ನಿಷ್ಠೆಯಿಂದ ಇರಬೇಕು. ಸತ್ಯ ಸಂಶೋಧನೆ ಮಾಡಿ ಪ್ರಚಲಿತ ಘಟನೆಯನ್ನು ವಿದ್ಯಾರ್ಥಿಗಳಿಗೆ ಹೇಳಬೇಕು. ಅಂದವಾದ ವಾಕ್ಯರಚನೆ ಮಾಡುವಂತೆ ಹೇಳಿಕೊಡಬೇಕು ಎಂದು ಹೇಳಿದರು.

ಯುಜಿಸಿ-ನೆಟ್‌-ಕೆಸೆಟ್‌ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳು ಬಹಳ ಶ್ರದ್ಧೆ ಉಳ್ಳವರು ಹಾಗೂ ತಮ್ಮ ಗುರಿಯನ್ನು ನಿಗದಿಪಡಿಸಿಕೊಂಡಿರುವವರು. ಜೊತೆಗೆ ಪ್ರಾಮಾಣಿಕ ವಿದ್ಯಾರ್ಥಿಗಳು ಎಂದು ಹೇಳಿದರು.

ಕೆಎಸ್‌ಒಯುನ ಪರೀಕ್ಷೆ ತರಬೇತಿ ವ್ಯವಸ್ಥೆಯು ಉತ್ತಮವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಅತ್ಯನ್ನತ ಪ್ರಾಧ್ಯಾಕರಾಗಬೇಕು ಎಂದು ಹಾರೈಸಿದರು.

ಕೆಎಸ್‌ಒಯುನ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಮಾತನಾಡಿ, ವಿದ್ಯಾರ್ಥಿಗಳು ಓದಿನ ಗೀಳನ್ನು ರೂಢಿಸಿಕೊಳ್ಳಬೇಕು. ನೀವೆಲ್ಲಾ ಮುಂದಿನ ದಿನಗಳಲ್ಲಿ ಪ್ರಾಧ್ಯಾಪಕರಾಗುವವರು ನಿಷ್ಠೆಯಿಂದ ನಿವೆಲ್ಲಾ ತರಗತಿಗಳನ್ನ ಬಳಸಿಕೊಳ್ಳಿ. ಮುಂದೆ ಪ್ರಾಧ್ಯಾಪಕರಾಗಿ ದೇಶಕ್ಕೆ ಉತ್ತಮ ಯುವಕರನ್ನು ನೀಡಿ ಎಂದರು.

ಪ್ರಾಧ್ಯಾಪಕರಿಗೆ ವಿದ್ಯಾರ್ಥಿಗಳೇ ತಮ್ಮ ಮಕ್ಕಳಾಗಿರುತ್ತಾರೆ. ಆಗಾಗಿ ವಿದ್ಯಾರ್ಥಿಗಳು ಪ್ರಾಧ್ಯಾಪಕರಿಗೆ ಗೌರವ ನೀಡಬೇಕು. ನಮ್ಮ ನಮ್ಮ ಆತ್ಮ ಆವಲೋಕನ ಮಾಡಿಕೊಳ್ಳಬೇಕು. ನಿಮ್ಮ ಓದು ನಿರಂತರವಾಗಿರಲಿ. ದೇಶದ ಭವಿಷ್ಯ ನಿರ್ಮಾಣ ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.

ಕೋಟ್ಸ್…
ಕೆಎಸ್‌ಓಯು ದೂರು ಶಿಕ್ಷಣದಲ್ಲಿ ರಾಜ್ಯದ ಏಕೈಕ ವಿವಿಯಾಗಿದೆ. ಯುಜಿಸಿ ನೆಟ್-ಕೆಸೆಟ್‌ ತರಬೇತಿಗೆ 230 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಇಲ್ಲಿನ ಕ್ಯಾಂಪಸ್‌ ಸೌಕರ್ಯಗಳನ್ನು ಬಳಸಿಕೊಳ್ಳಿ. ನಿಮ್ಮ ನಿಮ್ಮ ವಿಷಯಗಳ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ. ಅಲ್ಲಿನ ಅಧ್ಯಾಪಕರ ನೆರವು ಪಡೆದುಕೊಳ್ಳಿ. – ಪ್ರೊ.ಕೆ.ಬಿ ಪ್ರವೀಣ್, ಕೆಎಸ್‌ಒಯು ಕುಲಸಚಿವ

ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾನಿಲಯದ ಪ್ರೊ.ಜಿ.ಆರ್‌ಅಂಗಡಿ ಅವರು, ತರಬೇತಿ ಅಭ್ಯರ್ಥಿಗಳಿಗೆ ಶುಭಹಾರೈಸಿ ಪರೀಕ್ಷೆ ಎದುರಿಸುವ ಕುರಿತು ಸಲಹೆ ಹಾಗೂ ಯುಜಿಸಿ ನೆಟ್-ಕೆಸೆಟ್‌ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗಿದ್ದ ಹಲವು ಗೊಂದಲಗಳನ್ನು ನಿವಾರಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಅಧ್ಯಯನ ಕೇಂದ್ರದ ಡೀನ್‌ ಪ್ರೊ. ರಾಮನಾಥಂ ನಾಯ್ಡು, ಕುಲಪತಿಗಳ ವಿಶೇಷ ಅಧಿಕಾರಿ ಮಹದೇವು, ಸ್ಪರ್ಧತ್ಮಕ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ,  ಸಿದ್ದೇಶ್‌ ಹೊನ್ನುರು, ಗಣೇಶ್‌  ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

2 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

3 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

4 hours ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

4 hours ago