Mysore
15
broken clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ನಾಡಹಬ್ಬ ದಸರಾಗೆ ಚಾಮರಾಜೇಂದ್ರ ಮೃಗಾಲಯ ಮತ್ತಷ್ಟು ಪ್ರವಾಸಿ ಸ್ನೇಹಿ

ಮೈಸೂರು : ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಅಧ್ಯಕ್ಷ ಶಿವಕುಮಾರ್.

ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ದಸರಾ ಮಹೋತ್ಸವದ ಸಂದರ್ಭದಲ್ಲಿ ಆಗಮಿಸುವ ಪ್ರವಾಸಿಗರನ್ನು ಮೃಗಾಲಯಕ್ಕೆ ಸೆಳೆಯುವ ಉದ್ದೇಶದಿಂದ ಆನ್ಲೈನ್ನಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಮೃಗಾಲಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಮಾಹಿತಿ ಜಾಲಕ್ಕೆ ಒಳಪಡಿಸಲಾಗಿದೆ. ಮುಂಬರುವ ದಸರಾ ಮಹೋತ್ಸವವನ್ನು ಗುರಿಯಾಗಿಸಿಕೊಂಡು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯವನ್ನು ಮತ್ತಷ್ಟು ಪ್ರವಾಸಿ ಸ್ನೇಹಿಯಾಗಿಸಲು ಕ್ರಮಕೈಗೊಳ್ಳಲಾಗವುದು ಎಂದು ರಾಜ್ಯ ಮೃಗಾಲಯಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್ ತಿಳಿಸಿದರು. ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ನಿತ್ಯವೂ ಸ್ಥಳೀಯರಿಗಿಂತ ಹೆಚ್ಚಾಗಿ ಅನ್ಯ ರಾಜ್ಯ ಸೇರಿದಂತೆ ಪ್ರಪಂಚದ ನಾನಾ ಮೂಲೆಗಳಿಂದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಕಳೆದ ಎರಡು ವರ್ಷಗಳಲ್ಲಿ ಮೃಗಾಲಯದ ನಿರ್ವಹಣೆಗೆ ಕೊಂಚ ಹಿನ್ನಡೆಯಾದರೂ ಸಚಿವ ಎಸ್.ಟಿ. ಸೋಮಶೇಖರ್ ಅವರ ಸಹಕಾರ ಹಾಗೂ ದಾನಿಗಳ ನೆರವಿನಿಂದ ಹೆಚ್ಚಿನ ತೊಂದರೆಯಾಗಲಿಲ್ಲ. ನಾನು ಅಧಿಕಾರ ವಹಿಸಿಕೊಂಡ ನಂತರ ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಸ್ವಚ್ಛತೆ, ಪ್ರಾಣಿಗಳ ನಿರ್ವಹಣೆ, ಆಹಾರ ಪದಾರ್ಥಗಳ ಖರೀದಿ, ವಿತರಣೆ, ಪ್ರವಾಸಿ ಸ್ನೇಹಿ ವಾತಾವರಣ ಕಂಡುಬರುತ್ತಿದೆ. ಸದ್ಯ ದಸರಾ ಮಹೋತ್ಸವ ಸಮೀಪಿಸುತ್ತಿರುವುದರಿಂದ ಮೃಗಾಲಯಕ್ಕೆ ಭೇಟಿ ನೀಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!