ಮೈಸೂರು

ತಿ. ನರಸೀಪುರ | ಗುಂಜನರಸಿಂಹ ಸ್ವಾಮಿ ಆವರಣದ ಮಹಾಲಕ್ಷ್ಮಿ ಗುಡಿಯಲ್ಲಿ ಕಳ್ಳತನ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ತಿ. ನರಸೀಪುರ : ಪಟ್ಟಣದ ಪ್ರಸಿದ್ಧ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಅಮ್ಮನವರ ಗುಡಿಯ ಹುಂಡಿಯಲ್ಲಿದ್ದ ಹಣವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ.

ಕಳ್ಳರು ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಮೇಲಿಂದ ಇಳಿದು, ನಂತರ ಶ್ರೀ ಮಹಾಲಕ್ಷ್ಮಿ ದೇವಾಲಯದ ಗೇಟ್ ಬೀಗವನ್ನು ಮುರಿದು ಒಳ ನುಗ್ಗಿದ್ದಾರೆ. ದೇವಾಲಯದ ಒಳಗೆ ಪ್ರವೇಶಿಸಿದ ಕಳ್ಳರು, ಮಹಾಲಕ್ಷ್ಮಿ ಗುಡಿಯಲ್ಲಿನ ಹುಂಡಿಯನ್ನು ಒಡೆದು ಅದರಲ್ಲಿ ಸಂಗ್ರಹವಾಗಿದ್ದ ನಗದು ಹಣವನ್ನು ಕದ್ದೊಯ್ದಿದ್ದಾರೆ. ಆದರೆ, ಹುಂಡಿಯಲ್ಲಿದ್ದ ಚಿಲ್ಲರೆ ಕಾಸುಗಳನ್ನು ಮಾತ್ರ ಅಲ್ಲಿಯೇ ಬಿಟ್ಟು ಹೋಗಿದ್ದಾರೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ಕಳ್ಳತನದ ಈ ಸಂಪೂರ್ಣ ಕೃತ್ಯವು ದೇವಾಲಯದ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ, ಟಿ. ನರಸೀಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-ಗ್ರಾಮೀಣ ಜನರಿಗೆ ಮಾಹಿತಿ ನೀಡಲು ಗ್ರಾಮದನಿ ಪಾಡ್‌ಕಾಸ್ಟ್‌  ಲೋಕಾರ್ಪಣೆ: ಸಚಿವ ಪ್ರಿಯಾಂಕ್‌ ಖರ್ಗೆ 

ಮಾಹಿತಿ ತಿಳಿದ ಕೂಡಲೇ, ಡಿ ವೈ ಎಸ್ ಪಿ ರಘು, ಇನ್ಸ್ಪೆಕ್ಟರ್ ಧನಂಜಯ್, ಮತ್ತು ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳ ತಂಡ ದೇವಾಲಯಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ದೇವಾಲಯದ ಭದ್ರತಾ ವ್ಯವಸ್ಥೆ ಮತ್ತು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

ಈ ಕಳ್ಳತನದ ಘಟನೆಯು ಪಟ್ಟಣದ ಭಕ್ತರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಮುಖ ದೇವಾಲಯಗಳ ಭದ್ರತೆ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಆಂದೋಲನ ಡೆಸ್ಕ್

Recent Posts

ಚಾ.ಬೆಟ್ಟದ ತಪ್ಪಲಿನಲ್ಲಿ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಸಸ್ಯ ಸಂಕುಲ ಹಾನಿ

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…

30 mins ago

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…

1 hour ago

ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…

3 hours ago

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…

3 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…

3 hours ago

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು…

3 hours ago