ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ.
ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ ಬಳಿಯಿದ್ದ ಮಾರಕಾಸ್ತ್ರಗಳಿಂದ ದಾಳಿಗೆ ಮುಂದಾಗಿದ್ದಾರೆ. ಬಳಿಕ ಚಾಕು ತೋರಿಸಿ ಎದರಿಸಿ ಮನೆಯಲ್ಲಿದ್ದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಜತೆಗೆ ನಗದು ಹಣವನ್ನು ದೋಚಿರುವುದು ಗೊತ್ತಾಗಿದೆ.
ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ದರೋಡೆ ವೇಳೆ ಕಳ್ಳರು ಬಳಸಿದ್ದ ಕಬ್ಬಿಣದ ರಾಡ್, ಎಲೆಕ್ಟ್ರಿಕ್ ಸಾಮಾಗ್ರಿ, ಸಲಾಕೆ, ಬ್ಯಾಗ್ ಸೇರಿದಂತೆ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
ಕಳ್ಳತನ ವೇಳೆ ಭಕ್ತಿ ಮೆರೆದ ಚಾಲಾಕಿ ಕಳ್ಳ: ಇನ್ನು ಕಳ್ಳತನಕ್ಕಾಗಿ ಮನೆಯೊಂದರ ಬಾಗಿಲು ಮುರಿಯುವ ಮುನ್ನಾ ಕಳ್ಳನೊಬ್ಬ ನಿಂಬೆ ಹಣ್ಣಿಟ್ಟು, ನಮಸ್ಕರಿಸಿ ನಂತರ ಬಾಗಿಲು ಮುರಿದಿದ್ದಾರೆ. ಈ ದೃಶ್ಯ ಸದ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…