ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ ಬಿದ್ದು ಸರ್ಕಾರವೇ ಪಾಸ್ ಮಾಡಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು.
ಇಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಿಸಲಾಗಿದೆ. ರಾಜ್ಯದ ಬಹಳಷ್ಟು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಹೀಗಿದ್ದರೂ ಶೇ.94ರಷ್ಟು ಫಲತಾಂಶ ಬಂದಿದೆ. ಇದು ಹೇಗೆ ಸಾಧ್ಯ? ಇದು ಯಾವ ರೀತಿಯ ಸಾಧನೆ? ಹಟಕ್ಕೆ ಬಿದ್ದು ಇವರೆ ಪಾಸ್ ಮಾಡಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಬೊಧನೆ, ಶಿಕ್ಷಕರ ನೇಮಕಾತಿ, ಶಾಲೆಗಳಿಗೆ ಸೌಲಭ್ಯ ಒದಗಿಸುವುದರಲ್ಲಿ ಹಟ ಇರಬೇಕಿತ್ತು ಎಂದಿದ್ದಾರೆ.
ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿಹೋಗಿದೆ. 20ಕ್ಕೆ 20 ಆಂತರಿಕ ಅಂಕಗಳನ್ನು ಎಲ್ಲರಿಗೂ ಕೊಡಲಾಗಿದೆ. ಪಾಸಾಗಲು ಇನ್ನು ಬೇಕಾದದು 13 ಅಂಕ ಮಾತ್ರ. ಅದನ್ನು ನಕಲು ಮಾಡಿಸಿದ್ದಾರೆ. ಇದು ಬಹಳ ನೋವಿನ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.
ಗುಣಮಟ್ಟದ ಶಿಕ್ಷಣ ನೀಡದೆ ಎಲ್ಲರನ್ನೂ ಪಾಸ್ ಮಾಡಲು ಕಸರತ್ತು ನಡೆಸಿದ್ದಾರೆ. ಆದರೆ, ಮುಂದಿನ ಹಂತ ಪಿಯು ಶಿಕ್ಷಣ ಮುಂದುವರಿಸುವವರ ಪ್ರಮಾಣ ಕಡಿಮೆ ಆಗಲಿದೆ. ಇದು ಆಘಾತಕಾರಿಯಾದುದು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹಿಂದಿ ವಿಷಯದಲ್ಲಿ ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಆದರೂ ಸರ್ಕಾರ ಶಿಕ್ಷಣ ವಿರೋಧಿ ಕೆಲಸವನ್ನೇ ಮುಂದುವರೆಸುತ್ತಿದೆ. ಇದೆಲ್ಲವನ್ನೂ ನೋಡಿದರೆ ಶಿಕ್ಷಣ ಸಚಿವನಾಗಿದ್ದ ನನಗೆ ನೋವಾಗುತ್ತಿದೆ ಎಂದರು.
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…
ಭೇರ್ಯ ಮಹೇಶ್ ವಾಹನ ದಟ್ಟಣೆ ಹೆಚ್ಚಳವಾಗಿರುವುದರಿಂದ ಮೇಲ್ಸೇತುವೆ ನಿರ್ಮಿಸಬೇಕೆನ್ನುವುದು ಸ್ಥಳೀಯರ ಬೇಡಿಕೆ ಕೆ.ಆರ್.ನಗರ: ತಾಲ್ಲೂಕಿನ ಡೋರ್ನಹಳ್ಳಿ ರೈಲ್ವೆ ಅಂಡರ್…
ಕೆ.ಬಿ.ರಮೇಶನಾಯಕ ೮೦ ಆಕರ್ಷಕ ದೀಪಾಲಂಕೃತ ಪ್ರತಿಕೃತಿಗಳ ನಿರ್ಮಾಣ; ೩,೫೦೦ ಡ್ರೋನ್‌ಗಳ ಮೂಲಕ ಗಿನ್ನಿಸ್ ವಿಶ್ವ ದಾಖಲೆಗೆ ಸಿದ್ಧತೆ ಮೈಸೂರು: ನಾಡಹಬ್ಬ…