ಮೈಸೂರು : ಚಾಮರಾಜನಗರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಉತ್ತಮ ವಾತಾವರಣ ಇದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ನಗರದ ಜಯಲಕ್ಷ್ಮಿಪುರಂನ ತಮ್ಮ ನೀವಾಸ ಭೀಮಸಧನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಉತ್ತಮ ವಾತಾವರಣ ಇದೆ ಎಂದು ಹೇಳಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಕಣಕಿಳಿದಿದ್ದು, ಕಾಂಗ್ರಸ್ ಪಕ್ಷದ ಗೆಲುವಿನ ಎಲ್ಲಾ ವಾತಾವರಣ ಇದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಅವರನ್ನು ಹೊಗಳಿ ಮಾತನಾಡಲು ಸಾಧ್ಯವೇ? ವಿರೋಧ ಪಕ್ಷದಲ್ಲಿದ್ದಾಗ ಹಾಗೇ ಮಾತನಾಡಬೇಕಾಗುತ್ತದೆ. ಅವರೂ ಮತನಾಡಬೇಕು, ನಾವು ಮಾತನಾಡಬೇಕು ಎಂದರು.
ರಾಜಕೀಯದಲ್ಲಿ ಇದೆಲ್ಲಾ ಸಹಜ. ಆದರೆ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ದ್ವೇಷ ಇಲ್ಲ. ರಾಜಕೀಯ ಜೀವನ ಮುಗಿದಿದೆ. ಇನ್ನು ಮುಂದೆ ಸಿದ್ದರಾಮಯ್ಯ ಪರ ಅಥವ ವಿರೋಧವಾಗಿ ಮಾತನಾಡುವ ವಿಚಾರವೇ ಬರುವುದಿಲ್ಲ ಎಂದರು.
ಬೆಂಬಲ ನೀಡಲು ಸಿಎಂ ಮನವಿ : ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ನಾನು ಈಗಾಗಲೇ ಚುನಾವಣಾ ನಿವೃತ್ತಿ ಗೋಷಣೆ ಮಾಡಿದ್ದೇನೆ ಎಂದು ಅವರಿಗೆ ತಿಳಿಸಿದ್ದೇನೆ ಎಂದರು.