ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಖರ್ಚಾಗಲಿದೆ ಎಲ್ಲವನ್ನು ಸೇರಿಸಿ ಎರಡು ಸಾವಿರ ಕೋಟಿ ರೂ. ಯೋಜನೆ ರೂಪಿಸುತ್ತಿದ್ದೇವೆ. ಇದು ಸಣ್ಣ ಮೊತ್ತ ಅಲ್ಲ ಅಧಿಕಾರಿಗಳೊಂದಿಗೆ ಚರ್ಚಿಸಿ ಡಿಪಿಆರ್ ಸಿದ್ದಪಡಿಸುತ್ತೇವೆ. ಎರಡನೇಯ ದರ್ಜೆಯ ನಗರಗಳು ಬೆಳೆಯಬೇಕು. ಅದರಲ್ಲೂ ಮೈಸೂರು ಶರವೇಗದಲ್ಲಿ ಬೆಳೆಯುತ್ತಿರುವ ನಗರ ಇಲ್ಲಿನ ರಿಂಗ್ ರಸ್ತೆಗೆ ನಾಲ್ಕೈದು ಕಡೆ ಫ್ಲೈ ಓವರ್ ಆಗಬೇಕಿದೆ ಎಂದರು.
ಬೆಳಗಾವಿಯಲ್ಲಿ ಗುತ್ತಿಗೆದಾರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರು ನೇರವಾಗಿ ನನ್ನ ಹೆಸರು ಹೇಳಿದ್ದಾರಾ? ಗುತ್ತಿಗೆ ವಿಚಾರಕ್ಕೂ ನನಗೂ ಏನು ಸಂಬಂಧ? ಅವೆಲ್ಲವೂ ಇ-ಪ್ರಕ್ಯೂರ್‌ಮೆಂಟ್ ಮೂಲಕ ನಡೆಯುವ ಪ್ರಕ್ರಿಯೆ. ಅದರಲ್ಲಿ ನಮ್ಮವರನ್ನು ಹೇಗೆ ಸೇರಿಸಲು ಸಾಧ್ಯ ಎಂದರು. ಸುಖಾಸುಮ್ಮನೆ ಇಂತಹ ಆರೋಪಗಳು ಅಧಿಕಾರದಲ್ಲಿದ್ದಾಗ ಕೇಳಿ ಬರುತ್ತದೆ. ಯಾರು ಟೆಂಡರ್‌ನಲ್ಲಿ ಭಾಗವಹಿಸುತ್ತಾರೆ ಅಂತಹವರಿಗೆ ಟೆಂಡರ್ ಸಿಗುತ್ತೆ. ಬೆಳಗಾವಿ ಗುತ್ತಿಗೆದಾರರ ಪ್ರತಿಭಟನೆ ವಿಚಾರ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ಸಿಎಂ ಮತ್ತು ಡಿಸಿಎಂ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಹೇಳಿಕೆಗೆ ಉತ್ತರ ಕೊಡುವ ದೊಡ್ಡ ವ್ಯಕ್ತಿ ನಾನಲ್ಲ. ಆದರೂ ಕೆಲವು ಸತ್ಯ ಹೇಳುತ್ತೇನೆ ಕೇಳಿ. ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹರೇ ಬಿಜೆಪಿಯವರು. ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ್ದು ಬಿಜೆಪಿ. ಅವರು ಭ್ರಷ್ಟಾಚಾರ ಮಾಡಿ ಈಗ ಅದನ್ನು ನಮ್ಮ ಮೇಲೆ ಹೇಳುತ್ತಾರೆ. ಇಡೀ ರಾಜ್ಯದ ಜನರೇ ಹೇಳುತ್ತಿದ್ದಾರೆ ನಮ್ಮ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಾಜಕಾರಣದ ಬಗ್ಗೆ ನಾನು ಮಾತನಾಡಲ್ಲ. ರಾಜಕಾರಣ ಬಿಟ್ಟು ಬೇರೆ ಬೇಕಾದರೆ ಉತ್ತರಿಸುತ್ತೇನೆ ಎಂದು ತಿಳಿಸಿದರು.
ಶೀಘ್ರದಲ್ಲೇ ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ ಮಾಡುತ್ತೇವೆ. ಚುನಾವಣೆ ಮುಂದೂಡುವ ಪ್ರಶ್ನೆ ಸರ್ಕಾರದ ಮುಂದೆ ಇಲ್ಲ. ಮುಖ್ಯಮಂತ್ರಿ ಮತ್ತು ನಾನು ಚುನಾವಣೆ ನಡೆಸಲು ಉತ್ಸೂಕರಾಗಿದ್ದೇವೆ. ಲೋಕಸಭಾ ಚುನಾವಣೆಗೂ ಪಾಲಿಕೆ ಚುನಾವಣೆ ನಡೆಸುವುದಕ್ಕೂ ಯಾವುದೇ ಸಂಬಂಧ ಇಲ್ಲ. ಲೋಕಸಭಾ ಚುನಾವಣೆ ಇರುವುದು ಏಪ್ರಿಲ್‌ನಲ್ಲಿ. ಪಾಲಿಕೆ ಚುನಾವಣೆ ಮೀಸಲಾತಿ ಬಗ್ಗೆಯೂ ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ನಮಗೆ ಚುನಾವಣೆ ಪ್ರಕ್ರಿಯೆ ನಡೆಸಲು 15 ದಿನ ಸಾಕು. ನಾವು ಚುನಾವಣೆ ಮಾಡೇ ಮಾಡುತ್ತೇವೆ ಎಂದರು.
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…