ಮೈಸೂರು

ಬೆಂಗಳೂರು-ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಮಾಡುವ ಚಿಂತನೆ ಇದೆ : ಸಚಿವ ಭೈರತಿ ಸುರೇಶ್‌

ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಖರ್ಚಾಗಲಿದೆ ಎಲ್ಲವನ್ನು ಸೇರಿಸಿ ಎರಡು ಸಾವಿರ ಕೋಟಿ ರೂ. ಯೋಜನೆ ರೂಪಿಸುತ್ತಿದ್ದೇವೆ. ಇದು ಸಣ್ಣ ಮೊತ್ತ ಅಲ್ಲ ಅಧಿಕಾರಿಗಳೊಂದಿಗೆ ಚರ್ಚಿಸಿ ಡಿಪಿಆರ್ ಸಿದ್ದಪಡಿಸುತ್ತೇವೆ. ಎರಡನೇಯ ದರ್ಜೆಯ ನಗರಗಳು ಬೆಳೆಯಬೇಕು. ಅದರಲ್ಲೂ ಮೈಸೂರು ಶರವೇಗದಲ್ಲಿ ಬೆಳೆಯುತ್ತಿರುವ ನಗರ ಇಲ್ಲಿನ ರಿಂಗ್ ರಸ್ತೆಗೆ ನಾಲ್ಕೈದು ಕಡೆ ಫ್ಲೈ ಓವರ್ ಆಗಬೇಕಿದೆ ಎಂದರು.

ಬೆಳಗಾವಿಯಲ್ಲಿ ಗುತ್ತಿಗೆದಾರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರು ನೇರವಾಗಿ ನನ್ನ ಹೆಸರು ಹೇಳಿದ್ದಾರಾ? ಗುತ್ತಿಗೆ ವಿಚಾರಕ್ಕೂ ನನಗೂ ಏನು ಸಂಬಂಧ? ಅವೆಲ್ಲವೂ ಇ-ಪ್ರಕ್ಯೂರ್‌ಮೆಂಟ್ ಮೂಲಕ ನಡೆಯುವ ಪ್ರಕ್ರಿಯೆ. ಅದರಲ್ಲಿ ನಮ್ಮವರನ್ನು ಹೇಗೆ ಸೇರಿಸಲು ಸಾಧ್ಯ ಎಂದರು. ಸುಖಾಸುಮ್ಮನೆ ಇಂತಹ ಆರೋಪಗಳು ಅಧಿಕಾರದಲ್ಲಿದ್ದಾಗ ಕೇಳಿ ಬರುತ್ತದೆ. ಯಾರು ಟೆಂಡರ್‌ನಲ್ಲಿ ಭಾಗವಹಿಸುತ್ತಾರೆ ಅಂತಹವರಿಗೆ ಟೆಂಡರ್ ಸಿಗುತ್ತೆ. ಬೆಳಗಾವಿ ಗುತ್ತಿಗೆದಾರರ ಪ್ರತಿಭಟನೆ ವಿಚಾರ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ಸಿಎಂ ಮತ್ತು ಡಿಸಿಎಂ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಹೇಳಿಕೆಗೆ ಉತ್ತರ ಕೊಡುವ ದೊಡ್ಡ ವ್ಯಕ್ತಿ ನಾನಲ್ಲ. ಆದರೂ ಕೆಲವು ಸತ್ಯ ಹೇಳುತ್ತೇನೆ ಕೇಳಿ. ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹರೇ ಬಿಜೆಪಿಯವರು‌. ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ್ದು ಬಿಜೆಪಿ. ಅವರು ಭ್ರಷ್ಟಾಚಾರ ಮಾಡಿ ಈಗ ಅದನ್ನು ನಮ್ಮ ಮೇಲೆ ಹೇಳುತ್ತಾರೆ. ಇಡೀ ರಾಜ್ಯದ ಜನರೇ ಹೇಳುತ್ತಿದ್ದಾರೆ ನಮ್ಮ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಾಜಕಾರಣದ ಬಗ್ಗೆ ನಾನು ಮಾತನಾಡಲ್ಲ. ರಾಜಕಾರಣ ಬಿಟ್ಟು ಬೇರೆ ಬೇಕಾದರೆ ಉತ್ತರಿಸುತ್ತೇನೆ ಎಂದು ತಿಳಿಸಿದರು.

ಶೀಘ್ರದಲ್ಲೇ ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ ಮಾಡುತ್ತೇವೆ. ಚುನಾವಣೆ ಮುಂದೂಡುವ ಪ್ರಶ್ನೆ ಸರ್ಕಾರದ ಮುಂದೆ ಇಲ್ಲ. ಮುಖ್ಯಮಂತ್ರಿ ಮತ್ತು ನಾನು ಚುನಾವಣೆ ನಡೆಸಲು ಉತ್ಸೂಕರಾಗಿದ್ದೇವೆ. ಲೋಕಸಭಾ ಚುನಾವಣೆಗೂ ಪಾಲಿಕೆ ಚುನಾವಣೆ ನಡೆಸುವುದಕ್ಕೂ ಯಾವುದೇ ಸಂಬಂಧ ಇಲ್ಲ. ಲೋಕಸಭಾ ಚುನಾವಣೆ ಇರುವುದು ಏಪ್ರಿಲ್‌ನಲ್ಲಿ. ಪಾಲಿಕೆ ಚುನಾವಣೆ ಮೀಸಲಾತಿ ಬಗ್ಗೆಯೂ ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ನಮಗೆ ಚುನಾವಣೆ ಪ್ರಕ್ರಿಯೆ ನಡೆಸಲು 15 ದಿನ ಸಾಕು. ನಾವು ಚುನಾವಣೆ ಮಾಡೇ ಮಾಡುತ್ತೇವೆ ಎಂದರು.

lokesh

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

11 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago